ನೇಮಕಕ್ಕೂ ಮುನ್ನ ಪಿಎಸ್‌ಐ ಸಮವಸ್ತ್ರ ಧರಿಸಿ ಪೋಸ್‌ ಕೊಟ್ಟಿದ್ದ ಪೊಲೀಸ್‌ ಪೇದೆ ಅಮಾನತು

ಬೆಂಗಳೂರು: ಪಿಎಸ್‌ಐ ನೇಮಕಾತಿ ಆದೇಶಕ್ಕೂ ಮುನ್ನವೇ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್‌ಸ್ಟೆಬಲ್ ಬಸನಗೌಡನನ್ನು ಅಮಾನತು ಮಾಡಿದ್ದಾರೆ.

ಪಿಎಸ್‌ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. ಒಎಂಆರ್ ಪ್ರತಿ ಹಾಗೂ ಇತರೆ ದಾಖಲೆಗಳನ್ನು ಪಡೆದಿದ್ದರು. ವಿಚಾರಣೆ ಎದುರಿಸಿದ್ದ ಬಸನಗೌಡ, ನಂತರ ಕರ್ತವ್ಯಕ್ಕೆ ಹಾಜರಾಗಿದ್ದರು.545 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್‌ಐ) ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 27ನೇ ರ‍್ಯಾಂಕ್‌ ಪಡೆದಿದ್ದ ವಿವೇಕನಗರ ಠಾಣೆ ಕಾನ್‌ಸ್ಟೆಬಲ್ ಬಸನಗೌಡ ಕರೇಗೌಡರ ಎರಡು ಸ್ಟಾರ್ ಸಮೇತ ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.
‘ನೇಮಕಾತಿ ಆದೇಶವಿಲ್ಲದೇ ಸಮವಸ್ತ್ರ ಧರಿಸುವುದು ನಿಯಮ ಬಾಹಿರ. ಹೀಗಾಗಿ, ಬಸನಗೌಡ ಅವರನ್ನು ಅಮಾನತು ಮಾಡಲಾಗಿದೆ. ಇಲಾಖೆ ವಿಚಾರಣೆಗೆ ಆದೇಶಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement