ಸಿಎಂ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ ಸೇರಿ 17 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್‌ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ಮೌಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು,
ಅವರ ಸ್ಥಾನಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ತುಷಾರ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಕಾರ್ಯದರ್ಶಿಯಾಗಿದ್ದ ಪೊನ್ನುರಾಜ ವಿ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಅಲ್ಲದೇ ಕರ್ನಾಟಕ ವಿದ್ಯುತ್ ನಿಗಮದ ಎಂಡಿಯಾಗಿ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.

ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲಕುಮಾರ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಮನೋಜ್ ಜೈನ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಲಾಗಿದೆ. ಹಾಗೂ ಇದೇರೀತಿ ಸ್ಥಳ ನಿರೀಕ್ಷೆಯಲ್ಲಿದ್ದ ಖುಷ್ಬೂ ಚೌಧರಿ ಅವರನ್ನು ದೆಹಲಿ ಕರ್ನಾಟಕ ಭವನದ ಉಪ ಸ್ಥಾನೀಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕ್ಯಾಪ್ಟನ್ ರಾಜೇಂದ್ರ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯನ್ನಾಗಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಕೆಆರ್‌ಐಡಿಎಲ್‌ನ ಎಂಡಿಯಾಗಿ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ್ ಪಾಟೀಲ್ ಅವರನ್ನು ಬೆಳಗಾವಿಗೆ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಎಂಡಿ ಗುರುದತ್ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾಗೂಉಡುಪಿ ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ನವೀನ್ ಭಟ್ ಅವರನ್ನು ಕೆಎಸ್‌ಆರ್‌ಟಿಸಿಯ ಸಿಬ್ಬಂದಿ ವಿಭಾಗದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ದೆಹಲಿ ಕರ್ನಾಟಕ ಭವನದ ಉಪ ಸ್ಥಾನೀಯ ಆಯುಕ್ತರಾಗಿದ್ದ ಪ್ರಸನ್ನ ಎಚ್‌ ಅವರನ್ನು ಉಡುಪಿ ಜಿಲ್ಲಾ ಪಂಚಾತ ಸಿಇಒ ಆಗಿ ವರ್ಗಾಯಿಸಲಾಗಿದೆ. ಬಾಗಲಕೋಟೆ ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಭೂಬಾಲನ್ ಟಿ ಅವರನ್ನು ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಕಲಬುರಗಿ ಜಿಪಂ ಸಿಇಒ ದಿಲೀಪ್‌ ಶಶಿ ಅವರನ್ನು ಆಡಳಿತ ಸುಧಾರಣೆ ಇಲಾಖೆಯ ಇಡಿಸಿಎಸ್‌ ವಿಭಾಗದ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಕೊಳ್ಳೆಗಾಲ ಎಸಿಯಾಗಿದ್ದ ದಿಲೀಪ್ ಬಾಡೋಳೆ ಅವರನ್ನು ಕಲಬುರಗಿ ಜಿಪಂ ಸಿಇಒ ಆಗಿ ವರ್ಗಾಯಿಸಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಭರತ್ ಎಸ್ ಅವರಿಗೆ ಹುಬ್ಬಳ್ಳಿಯ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಎಂಡಿಯಾಗಿ ನಿಯುಕ್ತಿಗೊಳಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಶಿಲ್ಪಾ ಅವರನ್ನು ಕರ್ನಾಟಕ ನಗರ ಮೂಲಭೂತ ಸೌಕರ್ಯ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

 

ಪ್ರಮುಖ ಸುದ್ದಿ :-   ವಿಡಿಯೊ | ನೀಟ್ ಜಟಾಪಟಿ : ಬಿಜೆಪಿಯಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ; ಬಿಜೆಪಿ ಶಾಸಕ ಬಿಪಿ ಹರೀಶ ಮೇಲೆ ಮೊಟ್ಟೆ ಎಸೆತ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement