10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರೀತಿಸುವಂತೆ ಒತ್ತಾಯಿಸಿದ್ದ ಎಂದು ಅನ್ಯಕೋಮಿನ ಯುವಕನ ವಿರುದ್ಧ ಪ್ರಕರಣ ದಾಖಲು

posted in: ರಾಜ್ಯ | 0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರಿನ ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ದಾಖಲಾಗಿದೆ.
ಯುವಕ ಹಮೀದ್ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .
ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಮಸೀದಿ ಹಿಂಬಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕುಟುಂಬ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ತಾಯಿ ಮನೆಗೆ ಮರಳಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಕುಟುಂಬ ಕಣಿಯೂರು ಮಸೀದಿ ಹಿಂಭಾಗದ ಬಾಡಿಗೆ ಮನೆಯಲ್ಲಿ ವಾಸವಿತ್ತು. ಮನೆಯವರು ಕೆಲಸಕ್ಕೆ ಹೋಗಿದ್ದಾಗ ಯಾರೂ ಇಲ್ಲದ ಸಮಯದಲ್ಲಿ ಸಂಜೀವ ಅವರ ಪುತ್ರಿ ಆತ್ಮೀಕಾ (14) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಕನ್ಯಾನ ಗ್ರಾಮದ ಶಾಹುಲ್‌ ಹಮೀದ್  ಎಂಬಾತ ಆತ್ಮಹತ್ಯೆಗೆ ಕಾರಣ, ಆತ ತನ್ನನ್ನು ಪ್ರೀತಿಸುವಂತೆ ತನ್ನ ಮಗಳಿಗೆ ಒತ್ತಾಯಿಸುತ್ತಿದ್ದ, ಇದರಿಂದ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಎಂದು ಸಂಜೀವ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಓದಿರಿ :-   ಬೆಳಗಾವಿ: ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ