ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅಮರನಾಥ ಯಾತ್ರೆಯ ಪ್ರಧಾನ ಮಾರ್ಗವಾಗಿರುವ ಪಹಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರಿನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಿವೆ.
ಈ ಮಾರ್ಗದಲ್ಲಿ ಸಂಭಾವ್ಯ ಉಗ್ರರ ದಾಳಿ ತಡೆಯುವ ನಿಟ್ಟಿನಲ್ಲಿ ಇದು ಬಹಳ ಮಹತ್ವದ ಎನ್‌ಕೌಂಟರ್ ಆಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಹತ್ಯೆಯಾದ ಉಗ್ರರ ಪೈಕಿ ಒಬ್ಬಾತ ಬಹಳ ದೀರ್ಘಕಾಲದಿಂದ ತಪ್ಪಿಸಿಕೊಂಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಕೂಡ ಸೇರಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಅಶ್ರಫ್ ಮೋಲ್ವಿ (ಹಿಜ್ಬುಲ್ ಉಗ್ರ ಸಂಘಟನೆಯ ಹಿರಿಯ ಉಗ್ರರಲ್ಲಿ ಒಬ್ಬ) ಹಾಗೂ ಇನ್ನು ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಅಮರನಾಥ ಯಾತ್ರೆಯ ಮಾರ್ಗದಲ್ಲಿ ನ ನಮಗೆ ಬಹು ದೊಡ್ಡ ಯಶಸ್ಸಾಗಿದೆ” ಎಂದು ಪೊಲೀಸ್ ಮಹಾ ನಿರ್ದೇಶಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಪಹಲ್ಗಾಮ್‌ನ ಅರಣ್ಯ ಒಂದರಲ್ಲಿ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು, ಸಂಪೂರ್ಣ ಪ್ರದೇಶವನ್ನು ಬಂದ್ ಮಾಡಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದರು. ಆಗ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾಗಿರುವ ಪಹಲ್ಗಾಮ್, ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್‌ಗಳಲ್ಲಿ ಒಂದು. ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಎರಡು ವರ್ಷಗಳ ನಂತರ ಜೂನ್ 30ರಿಂದ ಆರಂಭವಾಗಲಿದೆ ಎಂದುತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ