ವಿಜಯಪುರ: ಆಕಸ್ಮಿಕವಾಗಿ ಲಾರಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬೃಹತ್ ಲಾರಿಯೊಂದು ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರ ಜಿಲ್ಲೆಯ ಝಳಕಿ ಸಮೀಪದ ಎಚ್ ಪಿ ಪೆಟ್ರೋಲ್ ಪಂಪ್ ಬಳಿ ಸಂಭವಿಸಿದೆ.
ಈ ಬೃಹತ್ ಲಾರಿ ಗುಜರಾತಿನಿಂದ ಫೈಬರ್ ಕೇಬಲ್ ತುಂಬಿಕೊಂಡು ಲಾರಿ ಹೊರಟಿತ್ತು ಎಂದು ಹೇಳಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಲಾರಿಯಿಂದ ಚಾಲಕ ಹಾಗೂ ಕ್ಲೀನರ್ ಕೆಳಗಿಳಿದಿದ್ದಾರೆ. ತಕ್ಷಣವೇ ಲಾರಿ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಪೆಟ್ರೋಲ್ ಪಂಪ್ ಬಳಿಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಘಟನಾ ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ