ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯ

posted in: ರಾಜ್ಯ | 0

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ನಿಯಮಾವಳಿ ಪ್ರಕಾರ ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ದರೆ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿಗೆ ಅರ್ಹರಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸರ್ಕಾರಿ ಸೇವೆಯಲ್ಲಿರುವ ಡಿ ಗ್ರೂಪ್ ಹೊರತು ಪಡಿಸಿ ಎಲ್ಲ ನೌಕರರಿಗೂ ಈ ನಿಯಮ ಅನ್ವಯವಾಗಲಿದೆ.

ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. 2012ರಲ್ಲೇ ಈ ಬಗ್ಗೆ ನಿಯಮ ಜಾರಿಗೊಳಿಸಿತ್ತು. ಈಗ ಮತ್ತೆ ತಿದ್ದುಪಡಿ ಮಾಡಿ ಎಲ್ಲ ಸರ್ಕಾರಿ ನೌಕರರು 2022 ಡಿಸೆಂಬರ್ ಅಂತ್ಯದೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಿಕೊಳ್ಳುವುದನ್ನು ಕಡ್ಡಾಯ ಮಾಡಿ ಗಡುವು ನೀಡಿದೆ. 2022 ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಲು ಸರ್ಕಾರ ಗಡುವು ನೀಡಿದೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ತನ್ನ ಐಷಾರಾಮಿ ಕಾರನ್ನು ತಾನೇ ಕಾವೇರಿ ನದಿಯಲ್ಲಿ ಮುಳುಗಿಸಿದ ವ್ಯಕ್ತಿ...!
advertisement

ನಿಮ್ಮ ಕಾಮೆಂಟ್ ಬರೆಯಿರಿ