ಎರಡು ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ: ಅನಾಹುತ 7 ಮಂದಿ ಸಾವು

ಇಂದೋರ್‌: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸ್ವರ್ನ್ ಬಾಗ್ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದ ದೊಡ್ಡ ಬೆಂಕಿ ಅನಾಹುತದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ.
ಎಲೆಕ್ಟ್ರಿಕ್ ಮೀಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಬೆಂಕಿ ಕಟ್ಟಡಕ್ಕೂ ವ್ಯಾಪಿಸಿದೆ.

ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಮೂರು ಗಂಟೆಗಳ ಅಗ್ನಿಶಾಮಕ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸಲಾಯಿತು.
ಅಧಿಕಾರಿಗಳು ಐದು ಮೃತದೇಹಗಳನ್ನು ಹೊರತೆಗೆದಿದ್ದಾರೆ ಮತ್ತು ಗಾಯಗೊಂಡ ಒಂಬತ್ತು ಜನರನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಹೀಗಾಗಿ ಮೃತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.ಪೊಲೀಸ್ ಆಯುಕ್ತರು, “ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಒಂಬತ್ತು ಜನರನ್ನು ಸ್ಥಳದಲ್ಲಿದ್ದ ಅಧಿಕಾರಿಗಳು ರಕ್ಷಿಸಿದ್ದಾರೆ” ಎಂದು ಹೇಳಿದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ಭಾರತದಿಂದ ರಫ್ತು ನಿಷೇಧದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ದಾಖಲೆ ಏರಿಕೆ
advertisement

ನಿಮ್ಮ ಕಾಮೆಂಟ್ ಬರೆಯಿರಿ