ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂ ಮತ್ತಷ್ಟು ಪೊಲೀಸರ ತಲೆದಂಡವಾಗಿದೆ. ಕರ್ತವ್ಯಲೋಪ ಆರೋಪದಡಿ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಂ.ಎಸ್. ಇರಾನಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭದ್ರತಾ ಕೆಲಸಕ್ಕಾಗಿ ಈ 11 ಮಂದಿ ಸಿಬ್ಬಂದಿ ನಿಯೋಜನೆಗೊಂಡಿದ್ದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಕರ್ತವ್ಯಲೋಪ ಆರೋಪದಡಿ ಇಬ್ಬರು ಎಎಸ್ಐ ಹಾಗೂ 9 ಜನ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿದ್ದು, ಈ ಮೂಲಕ ಈವರೆಗೆ ಅಮಾನತುಗೊಂಡವರ ಸಂಖ್ಯೆ 13ಕ್ಕೆ ಏರಿದೆ. ಈಗಾಗಲೇ ಡಿವೈಎಸ್ಪಿ ಮತ್ತು ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ. ಸ್ಟೇಷನ್ ಬಜಾರ್ ಠಾಣೆಯ ಮೂವರು, ಮಹಿಳಾ ಠಾಣೆಯ 8 ಸಿಬ್ಬಂದಿ ಅಮಾತನುಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿ ಜಿಲ್ಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದ್ದು, ಈ ಕುರಿತು ಸಿಐಡಿ ತನಿಖೆ ಚುರುಕುಗೊಂಡಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ವೈಜನಾಥ ಎಂಬ ಪೊಲೀಸ್ ಅಧಿಕಾರಿಯ ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಅವರು ಕೆಲವು ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಶಂಶಯದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸಿಐಡಿ ಪ್ರಕರಣದ ವಿಚಾರಣೆಯನ್ನು ತೀವ್ರವಾಗಿ ನಡೆಸಿದ್ದು, ಇನ್ನಷ್ಟು ಪೊಲೀಸರ ತಲೆದಂಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರಾದ ಆರ್ಡಿ ಪಾಟೀಲ್, ಕಿಂಗ್ ಪಿನ್ ಎಂದು ಹೇಳಲಾಗುತ್ತಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಸಹ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ