ಬಸ್‌-ಇನ್ನೋವಾ ಕಾರ್‌ ಡಿಕ್ಕಿ: ಆರು ತಿಂಗಳ ಮಗು ಸಹಿತ ಮೂವರು ಸ್ಥಳದಲ್ಲೇ ಸಾವು

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆದೊಡ್ಡಿ ಬಳಿ ಶನಿವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇನೋವಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ ಹಾಗೂ ಕಾರು ಚಾಲಕ ಉಮೇಶ ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಇದ್ದ ಇನ್ನೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಡಿಕ್ಕಿ ರಭಸಕ್ಕೆ ಇನ್ನೋವಾ ಕಾರ್‌ ನುಜ್ಜುಗುಜ್ಜಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸೋಂದಾ‌ ಸ್ವರ್ಣವಲ್ಲೀ‌ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಆರಂಭ

ನಿಮ್ಮ ಕಾಮೆಂಟ್ ಬರೆಯಿರಿ

advertisement