ನವದೆಹಲಿ: ದೇಶದ್ರೋಹ ಕಾನೂನನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ಅದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಶನಿವಾರ ಮನವಿ ಮಾಡಿದೆ.
ವಸಾಹತುಶಾಹಿ ಯುಗದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.
ವಸಾಹತು ಕಾಲದ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರ ನೇತೃತ್ವದ ಮೂವರು ಸದಸ್ಯರ ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಲಿಖಿತ ಹೇಳಿಕೆ ಸಲ್ಲಿಸಿದ್ದು, ಕೇದಾರನಾಥ ಸಿಂಗ್ ಮತ್ತು ಬಿಹಾರ ರಾಜ್ಯ ನಡುವಿನ ಪ್ರಕರಣದಲ್ಲಿ ನ್ಯಾಯಾಲಯವು ದೇಶದ್ರೋಹ ಕಾನೂನನ್ನು ಎತ್ತಿಹಿಡಿಯುವ ತೀರ್ಪು ನೀಡಿದ್ದನ್ನು ಕೇಂದ್ರ ಉಲ್ಲೇಖಿಸಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸಮಾನತೆಯ ಹಕ್ಕು ಮತ್ತು ಜೀವಿಸುವ ಹಕ್ಕಿನಂತಹ ಮೂಲಭೂತ ಹಕ್ಕುಗಳ ನೆಲೆಗಟ್ಟಿನಲ್ಲಿ ಸೆಕ್ಷನ್ 124 ಎ (ದೇಶದ್ರೋಹ ಕಾನೂನು) ಎಲ್ಲ ಆಯಾಮಗಳನ್ನೂ ಸಾಂವಿಧಾನಿಕ ಪೀಠವೊಂದು ಈಗಾಗಲೇ ಪರಿಶೀಲಿಸಿದೆ” ಎಂದು ಸುಪ್ರೀಂಕೋರ್ಟ್‌ಗೆ ಸರ್ಕಾರ ತಿಳಿಸಿದೆ.
ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಐವರು ವ್ಯಕ್ತಿಗಳು ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಮೂವರು ಸದಸ್ಯರ ವಿಶೇಷ ನ್ಯಾಯಪೀಠವು ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ದೇಶದ್ರೋಹ ಕಾನೂನಿನ ದಂಡನೆಗಳನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕಳೆದ ವರ್ಷದ ಜುಲೈನಲ್ಲಿ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಸ್ವಾತಂತ್ರ್ಯ ಹೋರಾಟವನ್ನು ಹತ್ತಿಕ್ಕಲು ಮಹಾತ್ಮ ಗಾಂಧಿ ಅವರಂತಹ ವ್ಯಕ್ತಿಗಳನ್ನು ಸುಮ್ಮನಾಗಿಸಲು ಬ್ರಿಟಿಷರು ಬಳಸುತ್ತಿದ್ದ ನಿಯಮಗಳನ್ನು ಏಕೆ ರದ್ದು ಮಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು ಕೋರ್ಟ್ ಪ್ರಶ್ನಿಸಿತ್ತು.
ಅರ್ಜಿಗಳನ್ನು ಪರಿಶೀಲಿಸಲು ಸಮ್ಮತಿಸಿದ ನ್ಯಾಯಾಲಯವು, ಹೆಚ್ಚುತ್ತಿರುವ ಪ್ರಕರಣಗಳಿಗೆ ಕಾರಣವಾಗುವ “ಕಾನೂನಿನ ದುರುಪಯೋಗ” ತನ್ನ ಮುಖ್ಯ ಕಾಳಜಿಯಾಗಿದೆ ಎಂದು ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ