ಕಾಂಗ್ರೆಸ್‌ಗೆ ಆಘಾತ: ಮಾಜಿ ಸಚಿವ ಪ್ರಮೋದ್ ಮಧ್ವರಾಜ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಮಾಜಿ ಸಚಿವ,  ಹಾಗೂ ಪ್ರಭಾವಿ ರಾಜಕಾರಣಿ ಪ್ರಮೋದ್ ಮಧ್ವರಾಜ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ  ಅವರು ರಾಜೀನಾಮೆ ನೀಡಿದ್ದಾರೆ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಕರಾವಳಿ ಭಾಗದ ಪ್ರಭಾವಿ ಮುಖಂಡರೊಬ್ಬರನ್ನು ಕಳೆದುಕೊಂಡಂತಾಗಿದೆ.

ಪ್ರಮೋದ್ ಮಧ್ವರಾಜ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನನಗೆ ಪಕ್ಷದಲ್ಲಿ ದುಡಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ಮಾಡಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
. ಅವರು ಬಿಜೆಪಿಗೆ ಸೇರ್ಪಡೆಯಾದ ನಂತರ ಪಕ್ಷ ಯಾವ ಸ್ಥಾನ ಮಾನ ನೀಡಲಿದೆ ಎಂಬ ಕುತೂಹಲವಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement