ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದ ಅವರು,
ಈ ಮೊದಲು ನಾನು‌ ನನ್ನ ಜನ್ಮದಿನವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು 11 ಗೋವುಗಳನ್ನು ದತ್ತು ತೆಗೆದುಕೊಂಡು ಆಚರಿಸಿಕೊಂಡಿದ್ದೇನೆ ಎಂದು ಹೇಳಿದರು.

ಗೋವುಗಳನ್ನು ಗೋಮಾತೆ ಎಂದು ಪೂಜಿಸುವ ಲಕ್ಷಗಟ್ಟಲೆ ಜನರಿದ್ದಾರೆ. ಗೋವುಗಳ ಸೇವೆ ಪುಣ್ಯದ ಕೆಲಸವೆನ್ನುವ ಭಾವನೆ ನಮ್ಮಲ್ಲಿದೆ. ಈ ಯೋಜನೆಯಿಂದ ಗೋಶಾಲೆ ಹಾಗೂ ಗೋವುಗಳ ನಿರ್ವಹಣೆ ಸುಲಭಸಾಧ್ಯವಾಗಲಿದೆ. ವಯಸ್ಸಾದ ಗೋವುಗಳ ನಿರ್ವಹಣೆಗೆ ಪರಿಹಾರ ಒದಗಿಸುವ ಸಕಾರಾತ್ಮಕ ಚಿಂತನೆಯಿಂದ ಈ ಯೋಜನೆಯನ್ನು ಸರ್ಕಾರ ರೂಪಿಸಿದೆ ಎಂದು ಬೊಮ್ಮಾಯಿ ಹೇಳಿದರು.
ಗೋವು ಸಾಕಾಣಿಕೆಯಿಂದ ಹಾಲು, ಇತ್ಯಾದಿ ಉತ್ಪನ್ನಗಳಿಂದ ಜೀವನದ ಆಧಾರವಾಗಿಸಿಕೊಂಡಿದ್ದಾರೆ. ನಮ್ಮ ಸರ್ಕಾರ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರುವಾಗ, ವಯಸ್ಸಾದ ಗೋವುಗಳ ಸಾಕಾಣಿಕೆಯಿಂದ ರೈತರಿಗೆ ಹೊರೆಯಾಗುತ್ತದೆ ಎನ್ನುತ್ತಿದ್ದರು. ರೈತ ಗೋವುಗಳನ್ನು ಹೊರೆ ಎಂದು ತಿಳಿದೇ ಇಲ್ಲ. ಇಂತಹ ಗೋವುಗಳು ವಯಸ್ಸಾದ ನಂತರ ವಧೆ ಮಾಡುವ ಕೃತ್ಯಕ್ಕೆ ಕೆಲವರು ಪ್ರೋತ್ಸಾಹ ನೀಡುತ್ತಾರೆ. ನಮ್ಮ ದೇಶದ ಸಂಸ್ಕೃತಿ, ಜೀವ ಉಳಿಸುವುದೇ ಹೊರತು ವಧೆ ಮಾಡುವುದಲ್ಲ ಎಂದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

ನಂದಿನ ಕ್ಷೀರ ಅಭಿವೃದ್ಧಿ ಸಹಕಾರಿ ಬ್ಯಾಂಕನ್ನು ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸಲು ಸ್ಥಾಪಿಸಲಾಗುತ್ತಿದೆ. 3600 ಕೋಟಿ ರೂ.ಗಳ ಬಂಡವಾಳದಿಂದ ಹಾಲು ಉತ್ಪಾದಿಸುವ ರೈತರಿಗೆ ಸುಲಭ ದರದಲ್ಲಿ ಸಾಲ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿಗೊಳಿಸಲಾಗುವುದು. ಗೋವುಗಳ ವಿವಿಧ ತಳಿಗಳ ಅಭಿವೃದ್ಧಿ, ಹಾಲು ಮೆಗಾ ಡೈರಿ ಸ್ಥಾಪನೆಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಸೆಕೆಂಡರಿ ಕೃಷಿ ನಿರ್ದೇಶನಾಲಯ ಮಾಡಿ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶಿಂದ ಸ್ಥಾಪಿಸಲಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಸಹಕಾರ, ಪಶುಸಂಗೋಪನೆ ಇಲಾಖೆಗಳನ್ನು ಸಂಯೋಜನೆಗೊಳಿಸುವ ಮೂಲಕ ಮಾಹತ್ಮಾಗಾಂಧಿಯವರ ಗ್ರಾಮಾಭಿವೃದ್ಧಿಯ ಕನಸನ್ನು ಸಾಕಾರಗೊಳಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಪ್ರೇರಣಾಶಕ್ತಿಯಾಗಿರುವ ಗೋಮಾತೆಯ ಆರೋಗ್ಯ ರಕ್ಷಣೆ ನಮ್ಮ ಆದ್ಯತೆ ಎಂದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement