ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗುವ ಸಾಧ್ಯತೆ: ಕರ್ನಾಟಕದಲ್ಲೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಂಡಮಾನ್‌ ಮತ್ತು ನಿಕೊಬಾರ್‌ ದ್ವೀಪಗಳು ಹಾಗೂ ಒಡಿಶಾದ ಕಡಲ ತೀರ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗುವ ಸಾಧ್ಯತೆ ನಿಚ್ಚಳವಾಗಿದ್ದು, ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹೇಳಲಾಗಿದೆ.
ಅಲ್ಲದೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿಯೂ ಧಾರಾಕಾರ ಮಳೆ ಸುರಿಯಲಿದೆ ಎಂದು ಹೇಳಲಾಗಿದ್ದು ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಶನಿವಾರ ಗುಡುಗು ಸಹಿತ ಭಾರಿ ಮಳೆ ಬೀಳಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಗರದ ಹಲವು ಬಡಾವಣೆಗಳಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement