ಮಾಜಿ ಸಚಿವ ಪ್ರಮೋದ ಮಧ್ವರಾಜ, ವರ್ತೂರ್‌ ಪ್ರಕಾಶ ಸೇರಿ ಹಲವರು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಪ್ರಭಾವಿ ನಾಯಕ ಪ್ರಮೋದ ಮಧ್ವರಾಜ ಮತ್ತು ವರ್ತೂರ್‌ ಪ್ರಕಾಶ್‌ ಬಿಜೆಪಿ ಸೇರಿದ್ದಾರೆ.
ಪ್ರಮೋದ್ ಮಧ್ವರಾಜ ಶನಿವಾರ ಮಧ್ಯಾಹ್ನ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.ಶನಿವಾರ ಸಂಜೆ ಪರಾಗ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ
ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಮ್ಮುಖದಲ್ಲಿ ಇಬ್ಬರು ನಾಯಕರು ಬಿಜೆಪಿಗೆ ಸೇರ್ಪಡೆಯಾದರು.

ಇವರಿಬ್ಬರಲ್ಲದೆ, ಮಾಜಿ ಸಂಸದರಾದ ಕೆ. ಬಿ. ಕೃಷ್ಣಮೂರ್ತಿ, ಮಾಜಿ ಶಾಸಕ ಮಂಜುನಾಥ ಗೌಡ, ಮಾಜಿ ಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜ ಸಹ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಅಶೋಕ್‌ ಜಯರಾಂ, ಮಾಜಿ ಐಆರ್‌ಎಸ್‌ ಅಧಿಕಾರಿ ಡಾ. ಲಕ್ಷ್ಮೀ ಅಶ್ವಿನ್‌ ಗೌಡ ಅವರು ಸಹ ಬೆಂಬಲಿಗರ ಜೊತೆ ಬಿಜೆಪಿಗೆ ಸೇರ್ಪಡೆಯಾದರು. ನಳಿನ್ ಕುಮಾರ್ ಕಟೀಲ್ ಪಕ್ಷದ ಧ್ವಜ ನೀಡಿ ಎಲ್ಲಾ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ವರ್ತೂರ್‌ ಪ್ರಕಾಶ್‌ 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ನಮ್ಮ ಕಾಂಗ್ರೆಸ್ ಎಂಬ ಪಕ್ಷ ಕಟ್ಟಿದ್ದ ವರ್ತೂರು ಪ್ರಕಾಶ್ ಸೋಲು ಕಂಡಿದ್ದರು. ಬಳಿಕ ನಡೆದ ಗ್ರಾಮ ಪಂಚಾಯತ, ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಿಸಿದ್ದರು.ಪ್ರಮೋದ ಮಧ್ವರಾಜ 2013ರ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. 2018ರ ಚುನಾವಣೆಯಲ್ಲಿ ಸೋಲುಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕರ್ನಾಟಕ ನಮ್ಮ ಕಪಿಮುಷ್ಟಿಯಲ್ಲಿರುವ ಕ್ಷೇತ್ರ ಎಂದು ಕೆಲವರು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ, ರಾಜಕಾರಣ ನಿಂತ ನೀರಲ್ಲ, ಜನ ಬದಲಾವಣೆ ಬಯಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿಯೂ ಬಿಜೆಪಿ ಗಾಳಿ ಬೀಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್​​ಗೆ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement