ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾಲಯ, ಸಹಾಯವಾಣಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಬಹುನಿರೀಕ್ಷಿತ ಸಂಚಾರಿ ಪಶು ಚಿಕಿತ್ಸಾಲಯ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಶನಿವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್ ಮತ್ತಿತರರು ಲೋಕಾರ್ಪಣೆ ಮಾಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 275 ಪಶು ಸಂಜೀವಿನಿ ಅಂಬುಲೆನ್ಸ್ ಹಾಗೂ ಸಹಾಯವಾಣಿ ಸಂಖ್ಯೆ 1962ಕ್ಕೆ ಚಾಲನೆ ನೀಡಲಾಯಿತು. ಸದ್ಯ ಒಂದು ಲಕ್ಷ ಜಾನುವಾರುಗಳಿಗೆ ಒಂದು ವಾಹನ, ಒಬ್ಬ ಪಶು ವೈದ್ಯ, ಸಹಾಯಕ, ಚಾಲಕರು, ಅಂಬುಲೆನ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಜಾನುವಾರುಗಳ ಆರೋಗ್ಯದಲ್ಲಿ ತೊಂದರೆ ಉಂಟಾದಾಗ ರೈತರು ಕರೆ ಮಾಡಿದ ಸ್ಥಳಕ್ಕೆ ಆ್ಯಂಬುಲೆನ್ಸ್ ಸ್ಥಳಕ್ಕೆ ಹೋಗಲಿದೆ ಎಂದು ತಿಳಿಸಲಾಗಿದೆ.

ಇದಕ್ಕಾಗಿ ಪಶು ಸಂಗೋಪನಾ ಇಲಾಖೆಯು 1962 ಸಹಾಯವಾಣಿಯನ್ನೂ ಆರಂಭ ಮಾಡಿದ್ದು, ಇದು 24*7 ನಿರಂತರ ಕಾರ್ಯ ನಿರ್ವಹಿಸಲಿದೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40ರಷ್ಟು ಅನುದಾನವನ್ನು ನೀಡಲಿದೆ. ಒಟ್ಟು 44 ಕೋಟಿ ರೂ. ಇದಕ್ಕೆ ವೆಚ್ಚದ ಯೋಜನೆ ಇದಾಗಿದೆ.
275 ಅಂಬುಲೆನ್ಸ್‌ಗಳ ಪೈಕಿ ಮೊದಲ ಹಂತವಾಗಿ ಜಾನುವಾರುಗಳ ಆರೋಗ್ಯ ಸೇವೆಗಾಗಿ 70 ಅಂಬುಲೆನ್ಸ್‌ಗಳು ಕಾರ್ಯ ನಿರ್ವಹಿಸಲಿವೆ. ಮುಂದೆ ಹಂತ ಹಂತವಾಗಿ ಉಳಿದ ಅಂಬುಲೆನ್ಸ್‌ಗಳನ್ನು ನೀಡಲಾಗುತ್ತದೆ. ರಾಜ್ಯದಲ್ಲಿ 290 ಲಕ್ಷ ಜಾನುವಾರುಗಳಿದ್ದು, ಪ್ರಸಂಚಾರಿ ಪಶು ಚಿಕಿತ್ಸಾ ವಾಹನಗಳ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟರ್ ತೆರೆಯಲಾಗಿದೆ. ಇದಕ್ಕೆ ಉಚಿತ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement