ಖ್ಯಾತ ನಟಿ ನಯನತಾರಾ-ವಿಘ್ನೇಶ್​ ಶಿವನ್​ ಮದುವೆ ದಿನಾಂಕ ನಿಗದಿ…!

ಚೆನ್ನೈ: ‘ಲೇಡಿ ಸೂಪರ್​ಸ್ಟಾರ್’ ನಯನತಾರಾ ಮತ್ತು ಜನಪ್ರಿಯ ನಿರ್ದೇಶಕ ವಿಘ್ನೇಶ್​ ಶಿವನ್​ ಕಳೆದ ನಾಲ್ಕು ವರ್ಷಗಳಿಂದ ಡೇಟಿಂಗ್​ ಮಾಡುತ್ತಿದ್ದು, ಸದ್ಯದಲ್ಲೇ ಇಬ್ಬರೂ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಬಂದಿದೆ. ಅವರಿಬ್ಬರೂ ಮದುವೆ ಆಗುವ ಘಳಿಗೆ ಇನ್ನೂ ಬಂದಿಲ್ಲ ಎಂದು ಹೇಳುತ್ತಿರುವಾಗಲೇ ಈ ಸುದ್ದಿಬಂದಿದೆ. ಕೊನೆಗೂ ತಾರಾದಂಪತಿಯ ಮದುವೆಗೆ ದಿನಾಂಕದ ಜತೆಗೆ ಸ್ಥಳವೂ ನಿಗದಿಯಾಗಿದ್ದು, ಬಹುಕಾಲದ ಕುತೂಹಲಕ್ಕೆ … Continued

ಹಣ ಪಡೆದು ಸಿಎಂ ಮಾಡುವ ಸಂಸ್ಕೃತಿ ಬಿಜೆಪಿಯಲ್ಲಿಲ್ಲ, ನಾನು ಹಾಗೆ ಎಲ್ಲಿಯೂ ಹೇಳಿಲ್ಲ: ಯತ್ನಾಳ ಸ್ಪಷ್ಟನೆ

ವಿಜಯಪುರ: ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಹೇಳಿದ ಅರ್ಥ ಬೇರೆ ಇದೆ. ಮುಖ್ಯಮಂತ್ರಿ ಮಾಡ್ತೇವೆ ಎಂದು ಕೆಲವರು ವಾಟ್ಸಪ್ ಕಾಲ್ ಮಾಡುತ್ತಾರೆ. ನಮಗೆ ಮೋದಿ ಗೊತ್ತು, ಸೋನಿಯಾ ಗಾಂಧಿ ಗೊತ್ತು, ದೇವೇಗೌಡ್ರು ಗೊತ್ತು ಎಂದು ಹೇಳುತ್ತಾರೆ, ಅಂಥವರನ್ನು ನಂಬಬೇಡಿ ಎಂದು ಹೇಳಿದ್ದೇನೆಯೇ ಹೊರತು ಮುಖ್ಯಮಂತ್ರಿಯಾಗಲು ಹೈಕಮಾಂಡಿಗೆ ಹಣ ನೀಡಬೇಕಾಗುತ್ತದೆ … Continued

ರೈತರ ಮನೆ ಬಾಗಿಲಿಗೆ ಸಂಚಾರಿ ಪಶು ಚಿಕಿತ್ಸಾಲಯ, ಸಹಾಯವಾಣಿಗೆ ಸಿಎಂ ಬೊಮ್ಮಾಯಿ ಚಾಲನೆ

ಬೆಂಗಳೂರು: ಮನೆ ಬಾಗಿಲಿಗೆ ಹೋಗಿ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಬಹುನಿರೀಕ್ಷಿತ ಸಂಚಾರಿ ಪಶು ಚಿಕಿತ್ಸಾಲಯ ಮತ್ತು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಶನಿವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಸಂಸದ ಪಿ.ಸಿ.ಮೋಹನ್ ಮತ್ತಿತರರು … Continued

ವಿಐಪಿ ಸಂಸ್ಕೃತಿ ಇಲ್ಲ… ಬೆಂಬಲಿಗರ ಮನೆಯ ಕೈಪಂಪ್‌ನಲ್ಲಿ ಸ್ನಾನ ಮಾಡಿದ ಸಚಿವರು | ವೀಕ್ಷಿಸಿ

ನವದೆಹಲಿ: ಪಕ್ಷದ ಕಾರ್ಯಕರ್ತರೊಬ್ಬರ ಮನೆಯಲ್ಲಿ ರಾತ್ರಿ ತಂಗಿದ್ದ ಉತ್ತರ ಪ್ರದೇಶದ ಸಚಿವರೊಬ್ಬರು ಕೈಪಂಪ್‌ನ ನೀರಿನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೋ ಈಗ ವೈರಲ್‌ ಆಗಿದೆ. ಇದು ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ ಇಲ್ಲ ಎಂದು ಅವರು ತೋರಿಸಿದಂತಿದೆ. ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ‘ನಂದಿ’ ಅವರು ಶಹಜಹಾನ್‌ಪುರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ … Continued

ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾದ ಗೃಹಿಣಿ…!

ಮೈಸೂರು: ಗೃಹಿಣಿಯೊಬ್ಬರು ಸೆಲ್ಫಿ ತೆಗೆದೆಕೊಳ್ಳುವ ವೇಳೆ ಕಾಲು ಜಾರಿಬಿದ್ದು ನೀರುಪಾಲಾದ ಘಟನೆ ಜಿಲ್ಲೆಯ ನಂಜನಗೂಡಿನ ಕಪಿಲಾ ನದಿಯಲ್ಲಿ ನಡೆದಿದೆ. ಮೃತರನ್ನು ಚಾಮರಾಜನಗರ ಜಿಲ್ಲೆ ನಂಜದೇವನಪುರ ಗ್ರಾಮದ ಕವಿತಾ (38) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ದೂರ ಗ್ರಾಮದ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ರಾದ ಡಿ ಬಿ ನಾಗರಾಜ್ ಎಂಬುವರ ಪುತ್ರಿ ಎಂದು ಹೇಳಲಾಗಿದೆ. ಕವಿತಾ … Continued

ಕಾಂಗ್ರೆಸ್‌ಗೆ ಆಘಾತ: ಮಾಜಿ ಸಚಿವ ಪ್ರಮೋದ್ ಮಧ್ವರಾಜ ಕಾಂಗ್ರೆಸ್‌ಗೆ ರಾಜೀನಾಮೆ

ಉಡುಪಿ : ಮಾಜಿ ಸಚಿವ,  ಹಾಗೂ ಪ್ರಭಾವಿ ರಾಜಕಾರಣಿ ಪ್ರಮೋದ್ ಮಧ್ವರಾಜ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಪಕ್ಷ ಸೇರ್ಪಡೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ  ಅವರು ರಾಜೀನಾಮೆ ನೀಡಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಸದಸ್ಯತ್ವಕ್ಕೂ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗುವ ಸಾಧ್ಯತೆ: ಕರ್ನಾಟಕದಲ್ಲೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಂಡಮಾನ್‌ ಮತ್ತು ನಿಕೊಬಾರ್‌ ದ್ವೀಪಗಳು ಹಾಗೂ ಒಡಿಶಾದ ಕಡಲ ತೀರ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗುವ ಸಾಧ್ಯತೆ ನಿಚ್ಚಳವಾಗಿದ್ದು, ಹಲವೆಡೆ ಸುರಿಯುತ್ತಿರುವ ಮಳೆ … Continued

ಪಿಎಸ್​​ಐ ನೇಮಕಾತಿ ಪರೀಕ್ಷೆ ಅಕ್ರಮ: 11 ಪೊಲೀಸ್‌ ಸಿಬ್ಬಂದಿ ಅಮಾನತು

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂ ಮತ್ತಷ್ಟು ಪೊಲೀಸರ ತಲೆದಂಡವಾಗಿದೆ.‌ ಕರ್ತವ್ಯಲೋಪ ಆರೋಪದಡಿ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಂ.ಎಸ್. ಇರಾನಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭದ್ರತಾ ಕೆಲಸಕ್ಕಾಗಿ ಈ 11 ಮಂದಿ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಕರ್ತವ್ಯಲೋಪ ಆರೋಪದಡಿ ಇಬ್ಬರು ಎಎಸ್ಐ ಹಾಗೂ 9 ಜನ ಕಾನ್​ಸ್ಟೇಬಲ್​​ಗಳನ್ನು ಅಮಾನತು ಮಾಡಿದ್ದು, … Continued

ಬಗೆಹರಿಯದ ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಣೆ

ಕೊಲಂಬೊ: ಹೆಚ್ಚುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳನ್ನು ಎದುರಿಸಲು ಐದು ವಾರಗಳಲ್ಲಿ ಎರಡನೇ ಬಾರಿಗೆ ಭದ್ರತಾ ಪಡೆಗಳಿಗೆ ವ್ಯಾಪಕ ಅಧಿಕಾರ ನೀಡಲು ಶ್ರೀಲಂಕಾ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿದ ನಂತರ ಅವರು “ಸಾರ್ವಜನಿಕ ಸುವ್ಯವಸ್ಥೆ … Continued

ಹುಬ್ಬಳ್ಳಿ: ಇಂದು ಯೋಗ ಕಹಳೆ ಕಾರ್ಯಕ್ರಮ

ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ ಪಾರ್ಕ್‌ನ ವಿವೇಕ ಜಾಗೃತ ಬಳಗಗಳ ಆಶ್ರಯದಲ್ಲಿ ಸರ್ವೋತೊಮುಖ ಪ್ರಗತಿಗೆ ಪೂರಕವಾದ ‘ಯೋಗ ಕಹಳೆ’ ಕಾರ್ಯಕ್ರಮ ಭಾನುವಾರ ಮೇ ೮ರಂದು ಬೆಳಿಗ್ಗೆ ೧೦:೩೦ ರಿಂದ ವಿದ್ಯಾನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾ ಭವನದಲ್ಲಿ ನಡೆಯಲಿದೆ. ಯೋಗ ಕಹಳೆ ಕಾರ್ಯಕ್ರಮದಲ್ಲಿ ಕೋಟದ ಮೂಡುಗಿಳಿಯಾರು ಯೋಗಬನ ವೈದ್ಯಕೀಯ ನಿರ್ದೇಶಕರು ಮತ್ತು  ಸರ್ವಕ್ಷೇಮ … Continued