ಹರಿಯಾಣದ ಪಾಣಿಪತ್‌ನ ಬೆಹ್ರಾಂಪುರ ಗ್ರಾಮದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಹಾಗೂ ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಳಿಕ ಚಿರತೆಯನ್ನು ಯಶಸ್ವಿಯಾಗಿ ಹಿಡಿಯಲಾಯಿತು.
advertisement
9535127775 / 9901837775 / 6364528715 / 08362775155 / https://icsmpucollege.com/
ಶನಿವಾರ ರಕ್ಷಣಾ ತಂಡವು ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿರತೆ ಕಂಡ ಗ್ರಾಮಸ್ಥರ ಮಾಹಿತಿ ಮೇರೆಗೆ ತಂಡ ಕಾರ್ಯಾಚರಣೆ ನಡೆಸುತ್ತಿತ್ತು. ಚಿರತೆಯೊಂದಿಗೆ ಮುಖಾಮುಖಿಯಾದ ತಂಡದ ನೇತೃತ್ವ ವಹಿಸಿದ್ದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತು ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದಾರೆ. ಚಿರತೆಯನ್ನು ಹಿಡಿಯುವಲ್ಲಿ ತಂಡ ಯಶಸ್ವಿಯಾಗಿದೆ.
ಪಾಣಿಪತ್ ಪೊಲೀಸ್ ವರಿಷ್ಠಾಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರ ಶೌರ್ಯ ಮತ್ತು ಧೈರ್ಯ ಮೆಚ್ಚುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಪೊಲೀಸ್ ಮತ್ತು ಅರಣ್ಯ ಇಲಾಖೆಯ ಜನರಿಗೆ ಕೆಲಸದಲ್ಲಿ ಕಠಿಣ ದಿನ.. ಅವರಲ್ಲಿ ಇಬ್ಬರಿಗೆ ಗಾಯಗಳಾಗಿವೆ.. ಅವರ ಧೈರ್ಯಕ್ಕೆ ಸೆಲ್ಯೂಟ್.. ಕೊನೆಯಲ್ಲಿ, ಚಿರತೆ ಸೇರಿದಂತೆ ಎಲ್ಲರೂ ಸುರಕ್ಷಿತವಾಗಿದ್ದಾರೆ” ಎಂದು ಪಾಣಿಪತ್ ಎಸ್ಪಿ ಶಶಾಂಕ್ ಕುಮಾರ್ ಸಾವನ್ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಅಧಿಕಾರಿಗಳು ಪ್ರದರ್ಶಿಸಿದ ಧೈರ್ಯವನ್ನು ಶ್ಲಾಘಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ