ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ: ಅಧ್ಯಯನಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದ ಆಯೋಗ ನೇಮಕ

ಬೆಂಗಳೂರು: ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ರಾಜಕೀಯ ಮೀಸಲಾತಿ ನಿಗದಿಪಡಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ನೇಮಕ ಮಾಡಿ ಭಾನುವಾರ ಆದೇಶ ತಿದ್ದುಪಡಿ ಹೊರಡಿಸಲಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ನಿಖರವಾದ ಅಂಕಿಅಂಶಗಳೊಂದಿಗೆ ಖಚಿತಪಡಿಸಿಕೊಂಡ ಬಳಿಕವೇ ಈ ಸಮುದಾಯಗಳಿಗೆ ರಾಜಕೀಯ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಇದಕ್ಕಾಗಿ ಮೂರು ಹಂತದ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ತಾಕೀತು ಮಾಡಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಈಗ ನ್ಯಾ. ಕೆ. ಭಕ್ತವತ್ಸಲ ನೇತೃತ್ವದ ಆಯೋಗ ನೇಮಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನಿಮ್ಮ ಕಾಮೆಂಟ್ ಬರೆಯಿರಿ

advertisement