ರಾಜ್ಯದಲ್ಲಿ ಆಜಾನ್-ಭಜನೆ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಬಳಕೆಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಧ್ವನಿವರ್ಧಕಗಳಲ್ಲಿ ಆಜಾನ್-ಭಜನೆ ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಶೀಘ್ರ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಜಾನ್-ಭಜನೆ ಸಂಘರ್ಷದ ಬಗ್ಗೆ ಸೋಮವಾರ ತುರ್ತು ಸಭೆ ನಡೆಸಿದ್ದು, ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೋಲಿಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಅಧಿಕಾರಿಗಳಿಗೆ ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವನ್ನ ಪಾಲಿಸುವಂತೆ ಸೂಚನೆ ನೀಡಿದರು. ಅಲ್ಲದೆ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಅಳವಡಿಸಿರುವವರು ಅರ್ಜಿ ಹಾಕಿ ಅನುಮತಿ ಪಡೆಯಬೇಕು. ಅದಕ್ಕಾಗಿ ಅವರಿಗೆ 15 ದಿನ ಅಥವಾ 1 ತಿಂಗಳು ಕಾಲಾವಕಾಶ ನೀಡಲಾಗುವುದು. ಒಂದು ವೇಳೆ ಅನುಮತಿ ಪಡೆಯದೇ ಇದ್ದರೆ ಅಂಥ ಧ್ವನಿವರ್ಧಕಗಳನ್ನು ತೆರವು ಮಾಡುವ ಕುರಿತು ನಿರ್ಧರಿಸಲಾಗಿದೆ.

ಧ್ವನಿ ವರ್ಧಕದ ಬಗ್ಗೆ ಸುಪ್ರೀಂಕೋರ್ಟ್ ಆದೇಶದಂತೆ ಪಾಲಿಸಲು ತೀರ್ಮಾನಿಸಲಾಗಿದೆ. ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಒಂದು ಡೆಸಿಬಲ್, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಮತ್ತೊಂದು ಡೆಸಿಬಲ್ ನಲ್ಲಿ ಧ್ವನಿವರ್ಧಕ ಬಳಸುವ ನಿಟ್ಟಿನಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಹೊರಡಿಸಲಾಗುತ್ತಿದೆ.
ಈ ಮಾರ್ಗಸೂಚಿ ಕೇವಲ ಹಿಂದೂ ಧಾರ್ಮಿಕ ಅಥವಾ ಮುಸ್ಲಿಂ ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳಿಗೆ ಮಾತ್ರ ಅನ್ವಯವಾಗುವುದಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೂ ಇದು ಅನ್ವಯಿಸಲಿದೆ. ಈ ಕುರಿತು ನಾಳೆ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement