ಶ್ರೀಲಂಕಾದಲ್ಲಿ ಅಧ್ಯಕ್ಷ ರಾಜಪಕ್ಸೆ ಕುಟುಂಬದ ಪೂರ್ವಜರ ಮನೆಗೆ ಪ್ರತಿಭಟನಾಕಾರರಿಂದ ಬೆಂಕಿ

ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಮಧ್ಯೆ ಹಂಬಂಟೋಟಾದಲ್ಲಿ ರಾಜಕೀಯವಾಗಿ ಪ್ರಭಾವಿ ರಾಜಪಕ್ಸೆ ಕುಟುಂಬದ ಪೂರ್ವಜರ ಮನೆಗೆ ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ಕೊಲಂಬೊದಲ್ಲಿರುವ ಅಧ್ಯಕ್ಷ ಗೊತಾಬಯ ರಾಜಪಕ್ಸೆ ಅವರ ಕಚೇರಿಯ ಹೊರಗೆ ಸರ್ಕಾರದ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ಭುಗಿಲೆದ್ದ ಹಿಂಸಾತ್ಮಕ ಘರ್ಷಣೆಯ ಹಿನ್ನೆಲೆಯಲ್ಲಿ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದು ಸಂಭವಿಸಿದೆ.

ಅವರ ರಾಜೀನಾಮೆಯ ನಂತರ, ಮಹಿಂದಾ ರಾಜಪಕ್ಸೆಯನ್ನು ಬೆಂಬಲಿಸುವ ಗುಂಪುಗಳು ಶಾಂತಿಯುತ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿತು. ನಂತರ ರಾಜಪಕ್ಸ ಪರ ಬೆಂಬಲಿಗರು ರಾಜಧಾನಿಯಿಂದ ಹಿಂದಿರುಗುತ್ತಿದ್ದ ವೇಳೆ ಪ್ರತಿಭಟನಾಕಾರರು ಪ್ರತಿದಾಳಿ ನಡೆಸಿದರು.
ಹೆಚ್ಚುವರಿಯಾಗಿ, ಹಲವಾರು ಸಚಿವರು ಮತ್ತು ಮಾಜಿ ಸಚಿವರ ಮನೆಗಳ ಮೇಲೆ ದಾಳಿ ನಡೆಯಿತು ಮತ್ತು ಬೆಂಕಿ ಹಚ್ಚಲಾಯಿತು. ಸರ್ಕಾರದ ಪರ ಮತ್ತು ವಿರೋಧಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಸೋಮವಾರ ವಾಯುವ್ಯ ಪಟ್ಟಣವಾದ ನಿಟ್ಟಂಬುವಾದಲ್ಲಿ ನಡೆದ ಘರ್ಷಣೆಯ ನಡುವೆ ಶ್ರೀಲಂಕಾದ ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತುಕೋರಾಲ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕೋಟಿಗಟ್ಟಲೆ ಬೆಲೆಗೆ ಮಾರಾಟವಾಗಿ ನೂತನ ದಾಖಲೆ ನಿರ್ಮಿಸಿದ ಭಾರತದ ಮೂಲದ ಈ ತಳಿಯ ಹಸು..! ಬೆಲೆ ಕೇಳಿದ್ರೆ ದಂಗಾಗ್ತೀರಾ...!!

ಶ್ರೀಲಂಕಾದ ವಕೀಲರ ಸಂಘವು ಸಾರ್ವಜನಿಕರನ್ನು ಶಾಂತವಾಗಿರುವಂತೆ ಮನವಿ ಮಾಡಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸುವುದಾಗಿ ಹೇಳಿದೆ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದೆ.
ಸುಮಾರು ಒಂದು ತಿಂಗಳಿನಿಂದ ಶ್ರೀಲಂಕಾ ಇಂಧನ, ಔಷಧಗಳು ಮತ್ತು ವಿದ್ಯುತ್ ಪೂರೈಕೆಯ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ಹೆಚ್ಚುವರಿಯಾಗಿ, ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ವಿದೇಶಿ ಕರೆನ್ಸಿಯ ಕೊರತೆಯಿಂದಾಗಿ ಬಿಕ್ಕಟ್ಟು ಉಂಟಾಗಿದೆ, ಹೀಗಾಗಿ ದೇಶವು ಹೊರಗಿನ ದೇಶಗಳಿಂದ ಏನನ್ನೂ ಖರೀದಿಸಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement