ಹಣ ಇದ್ರೆ ಮಾತ್ರ ಜೆಡಿಎಸ್‌ಲ್ಲಿ​ ಟಿಕೆಟ್, ಜೆಡಿಎಸ್​ ಅಭ್ಯರ್ಥಿಗೆ ಮತ ಕೇಳಲ್ಲ: ವರಿಷ್ಠರ ವಿರುದ್ಧ ಬಹಿರಂಗವಾಗೇ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ

ಮಂಡ್ಯ: ಮಂಡ್ಯ: ಹಣ ಇದ್ದರೆ ಮಾತ್ರ ಜೆಡಿಎಸ್‌ನಲ್ಲಿ ಟಿಕೆಟ್ ಸಿಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಜೆಡಿಎಸ್‌ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಕೀಲಾರ ಜಯರಾಂಗೆ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿರುವ ಮರಿತಿಬ್ಬೇಗೌಡ ಅವರು, ನಾನು ಜೆಡಿಎಸ್​ ಅಭ್ಯರ್ಥಿ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳುವ ಮೂಲಕ ಜೆಡಿಎಸ್​ನಿಂದ ಹೊರಬೀಳುವ ಮುನ್ಸೂಚನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್​ ನಾಯಕರ ನಡೆ ಬಗ್ಗೆ ನನಗೆ ಬಹಳ ಬೇಸರವಾಗಿದೆ. ಇದನ್ನು ನಾಲ್ಕಾರು ವರ್ಷದಿಂದ ಅನುಭವಿಸಿಕೊಂಡು ಬಂದಿದ್ದೇನೆ. ನಾಯಕರಿಗೆ ಪಕ್ಷ ಸಂಘಟನೆ ಮಾಡಿದವರು, ಕಾರ್ಯಕರ್ತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ದಕ್ಷಿಣ ಪದವೀಧರ ಕ್ಷೇತ್ರದ ಟಿಕೆಟ್ ಬಗ್ಗೆ ಕೆಟ್ಟ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸಿರಲಿಲ್ಲ ಎಂದು ಹೇಳಿದ್ದಾರೆ.

ಜಯರಾಂ ಅವರ ಬಳಿ ಹಣ ಇಲ್ಲ ಎಂಬ ಕಾರಣಕ್ಕೆ ಟಿಕೆಟ್ ಬೇಡ ನಿರಾಕರಿಸಿದ್ದಾರೆ. ಈಗ ಟಿಕೆಟ್‌ ನೀಡಿದ ರಾಮು ಅವರು ಒಂದೇ ಒಂದು ದಿನವೂ ಪಕ್ಷ ಬಾವುಟ ಹಿಡಿದಿಲ್ಲ, ಪಕ್ಷಕ್ಕಾಗಿ ದುಡಿದಿಲ್ಲ. ಪಕ್ಷದ ಸದಸ್ಯತ್ವವನ್ನೇ ಪಡೆದಿಲ್ಲ, ಆದರೆ ಹಣ ಇದೆ ಎಂಬ ಕಾರಣಕ್ಕೆ ರಾಮುಗೆ ಟಿಕೆಟ್ ನೀಡಿದ್ದಾರೆ. ಜೆಡಿಎಸ್​ ನಾಯಕರ ಇಂಥ ಕೆಟ್ಟ ನಿರ್ಧಾರಕ್ಕೆ ನನ್ನ ಬೆಂಬಲ ಇಲ್ಲ. ನಾನು ಜೆಡಿಎಸ್ ಅಭ್ಯರ್ಥಿ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಸೂಕ್ತ ಸಮಯದಲ್ಲಿ ಹಿತೈಥಷಿಗಳು ಹಾಗೂ ಬಾಂಬಲಿಗರ ಜೊತೆ ಸಮಾಲೋಚಿಸಿ ಸೂಕ್ತ ಸಮಯದಲ್ಲಿ ನಾನು ಏನುಮಾಡಬೇಕುಎಂಬುದರ ಕುರಿತು ನಿರ್ಧರಿಸಿತ್ತೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement