ಬೆಂಗಳೂರು: ಅಸಾನಿ ಚಂಡಮಾರುತದ ಪರಿಣಾಮದ ಹಿನ್ನೆಲೆ ರಾಜ್ಯದ ಹಲವೆಡೆ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ.
ಅಸಾನಿ ಚಂಡಮಾರುವು ಆಂಧ್ರ ಹಾಗೂ ಒಡಿಶಾದ ಕರಾವಳಿಯತ್ತ ಸಾಗಿದ್ದು, ಅಸಾನಿ ಚಂಡಮಾರುತವು ಮುಂದಿನ 12 ಗಂಟೆಗಳಲ್ಲಿ ‘ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ’ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಹಾಗೂ ನಾಳೆ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಇದರ ಪ್ರಭಾವ ಕರ್ನಾಟಕದ ಹಲವು ಜಿಲ್ಲೆಗಳ ಮೇಲೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುತ್ತದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಬೀದರ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ