ಕಾರು-ಟಿಟಿ ವಾಹನದ ನಡುವೆ ಡಿಕ್ಕಿ : ಇಬ್ಬರ ಸಾವು

ತುಮಕೂರು: ಇಂದು, ಮಂಗಳವಾರ ನಸುಕಿನದಲ್ಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ಭೀಕರ ಅಪಘಾತ ನಡೆದಿ ಇಬ್ಬರು ಸಾವಿಗೀಡಾಗಿದ್ದಾರೆ.
ಕಾರು ಮತ್ತು ಟಿಟಿ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ರಘು (27) ಮತ್ತು ಸಂತೋಷ (21) ಎಂದು ಗುರುತಿಸಲಾಗಿದೆ.

ಟಿ.ಟಿ.ವಾಹನದಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತಪಟ್ಟವರು ಬೆಂಗಳೂರಿನವರು ಎಂದು ಹೇಳಲಾಗಿದೆ.
ಟಿ.ಟಿ. ವಾಹನ ಧರ್ಮಸ್ಥಳದ ಕಡೆಗೆ ಹೋಗುತ್ತಿತ್ತು. ಕಾರು ಟಿ.ಟಿ. ವಾಹನಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಚಿಕ್ಕಮಗಳೂರಿನಿಂದ- ಬೆಂಗಳೂರಿಗೆ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement