ನವದೆಹಲಿ: ಮಂಗಳವಾರ ದೆಹಲಿಯ ಕುತುಬ್ ಮಿನಾರ್‌ಗೆ ಹಿಂದೂ ಸಂಘಟನೆಗಳು ಪ್ರದರ್ಶನ ನಡೆಸಿ, ಸ್ಮಾರಕವನ್ನು ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.
ಮಹಾಕಾಲ್ ಮಾನವ ಸೇವಾ ಮತ್ತು ಇತರ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಗುರುತಿಸಿರುವ ಕುತುಬ್ ಮಿನಾರ್‌ನಲ್ಲಿ ಭಾರೀ ಪೊಲೀಸ್ ನಿಯೋಜನೆಯ ನಡುವೆ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಈ ಸಂಬಂಧ ದೆಹಲಿ ಪೊಲೀಸರು ಕನಿಷ್ಠ 30 ಮಂದಿ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.
advertisement
9535127775 / 9901837775 / 6364528715 / 08362775155 / https://icsmpucollege.com/
ಯುನೈಟೆಡ್ ಹಿಂದೂ ಫ್ರಂಟ್‌ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಭಗವಾನ್ ಗೋಯಲ್ ಮಾತನಾಡಿ, ಕುತುಬ್ ಮಿನಾರ್ ಅನ್ನು ಮಹಾರಾಜ ವಿಕ್ರಮಾದಿತ್ಯ ನಿರ್ಮಿಸಿದ್ದರು. ಆದ್ದರಿಂದಇದಕ್ಕೆ ವಿಷ್ಣು ಸ್ತಂಭ ಎಂದು ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.
ಏತನ್ಮಧ್ಯೆ, ದೆಹಲಿ ಬಿಜೆಪಿಯು ರಾಷ್ಟ್ರ ರಾಜಧಾನಿಯ ಅಕ್ಬರ್ ರಸ್ತೆ, ಹುಮಾಯೂನ್ ರಸ್ತೆ, ಔರಂಗಜೇಬ್ ಲೇನ್ ಮತ್ತು ತುಘಲಕ್ ಲೇನ್‌ಗಳ ಹೆಸರನ್ನು ಬದಲಾಯಿಸಬೇಕೆಂದು ಕೋರಿದೆ.
ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧ್ಯಕ್ಷರಿಗೆ ಪತ್ರ ಬರೆದ ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ಬೀದಿಗಳಿಗೆ ಮಹಾರಾಣಾ ಪ್ರತಾಪ್, ಗುರು ಗೋವಿಂದ್ ಸಿಂಗ್, ಮಹರ್ಷಿ ವಾಲ್ಮೀಕಿ ಮತ್ತು ಜನರಲ್ ವಿಪಿನ್ ರಾವತ್ ಹೆಸರನ್ನು ಮರುನಾಮಕರಣ ಮಾಡುವಂತೆ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ