ಬೆಂಗಳೂರು: ಸಾರಿಗೆ ಇಲಾಖೆಯಡಿ ವಿವಿಧ ಹಂತದಲ್ಲಿ ತಾತ್ಕಾಲಿಕ ಹುದ್ದೆಗೆ ನೇಮಕಗೊಂಡಿದ್ದ ಅಧಿಕಾರಿ, ಸಿಬ್ಬಂದಿಗಳನ್ನು ಒಂದು ವರ್ಷ ಅವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ
ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ಆದೇಶಿಸಿದ್ದು, ಮುಂದಿನ ವರ್ಷದ ಅವಧಿ ವರೆಗೂ ವಿಸ್ತರಿಸಿದೆ. ಇಲಾಖೆಯ ವಿವಿಧ ವೃಂದಗಳ ಒಟ್ಟು 796 ತಾತ್ಕಾಲಿಕ ಹುದ್ದೆಗಳಿಗೆ ಅನ್ವಯವಾಗುವಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ವಿವಿಧ ವರ್ಗಗಳ ವಾಹನಗಳ ಸಂಖ್ಯೆ ಪ್ರತಿ ವರ್ಷ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಬಾಗಿಲಿಗೆ ಸೇವೆ ಒದಗಿಸಲು ಸರ್ಕಾರ ಹೊಸದಾಗಿ ಕಚೇರಿಗಳನ್ನು ಪ್ರಾರಂಭಿಸಿದೆ. ಆದರೆ ಅವಶ್ಯವಿರುವ ಸಿಬ್ಬಂದಿ ಲಭ್ಯವಿಲ್ಲದ ಕಾರಣ ಕೆಲಸಗಳನ್ನು ಸುಸೂತ್ರವಾಗಿ ನಿರ್ವಹಿಸಲು ಕಳೆದೆರಡು ವರ್ಷಗಳಿಂದ ತಾತ್ಕಾಲಿಕವಾಗಿ ಒದಗಿಸಲಾಗಿದ್ದ ಎಲ್ಲ 805 ತಾತ್ಕಾಲಿಕ ಹುದ್ದೆಗಳನ್ನು ದಿನಾಂಕ 01-04-2022ರಿಂದ ಒಂದು ವರ್ಷದ ಅವಧಿಗೆ ಮುಂದುವರಿಸಬೇಕು ಎಂದು ಸಾರಿಗೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯಲ್ಲಿ ಸೃಜಿಸಲಾಗಿರುವ ಒಟ್ಟು 796 ತಾತ್ಕಾಲಿಕ ಹುದ್ದೆಗಳನ್ನು ದಿನಾಂಕ 01-04-2022ರಿಂದ ದಿನಾಂಕ 31-03-2023ರ ವರೆಗೆ ಒಂದು ವರ್ಷದ ಅವಧಿಗೆ ಮುಂದುವರೆಸಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ