ಕರ್ನಾಟಕದ 7 ಪರಿಷತ್‌ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಜೂನ್ 14ಕ್ಕೆ ಕೊನೆಗೊಳ್ಳುತ್ತಿರುವ ಕರ್ನಾಟಕ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ಜೂನ್ 14ರಂದು ಕೊನೆಗೊಳ್ಳಲಿದ್ದು, ಈ ಸ್ಥಾನಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ ಎಂದು ತಿಳಿಸಿದೆ.

ವಿಧಾನ ಪರಿಷತ್‌ ಸದಸ್ಯರಾದ ಲಕ್ಷ್ಮಣ ಸವದಿ, ಆರ್‌.ಬಿ.ತಿಮ್ಮಾಪುರ, ಎಚ್‌.ಎಂ.ರಮೇಶ ಗೌಡ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಲೇಹರ್‌ ಸಿಂಗ್‌ ಹಾಗೂ ನಾರಾಯಣಸ್ವಾಮಿ ಕೆ.ವಿ. ಅವರ ಅಧಿಕಾರವಧಿ ಜೂನ್ 14ರಂದು ಕೊನೆಗೊಳ್ಳಲಿದೆ.
ಮೇ 15ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಮೇ24 ಕೊನೆದ ದಿನವಾಗಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಮೇ 27 ಕೊನೆಯ ದಿನವಾಗಿದೆ.
ಜೂನ್ 3ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆದು, ಫಲಿತಾಂಶ ಘೋಷಣೆಯಾಗಲಿದೆ ಎಂದು ತಿಳಿಸಿದೆ.

 

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement