ಮೇ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನ ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಬಿ.ಸಿ ನಾಗೇಶ ಮಾಹಿತಿ ನೀಡಿದ್ದಾರೆ.
ಈ ಕುರಿತು ನಗರದಲ್ಲಿ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3ನೇ ವಾರ ಫಲಿತಾಂಶ ಹೊರ ಬೀಳಲಿದೆ ಎಂದು ಹೇಳಿದರು.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ನಿಮ್ಮ ಕಾಮೆಂಟ್ ಬರೆಯಿರಿ

advertisement