ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿ: ಅಭ್ಯರ್ಥಿಗಳು ವಾಚ್ ಕಟ್ಟಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ…! ಇಲ್ಲಿದೆ ಮಾರ್ಗಸೂಚಿಗಳು

ಬೆಂಗಳೂರು: ಇತ್ತೀಚಿನ ಪರೀಕ್ಷಾ ಅಕ್ರಮಗಳಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅಲರ್ಟ್ ಆಗಿದೆ. ಶಿಕ್ಷಕರ ನೇಮಕಾತಿಗಾಗಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆ ಈಗ ಟೆಕ್ನಾಲಜಿ ಬಳಸಿ ಪರೀಕ್ಷಾ ಅಕ್ರಮಕ್ಕೆ ಕಡಿವಾಣಕ್ಕೆ ಮುಂದಾಗಿದೆ.
ಮೇ 21 ಹಾಗೂ 22 ರಂದು 15 ಸಾವಿರ ಶಿಕ್ಷಕರ ನೇಮಕಾತಿ ಉದ್ದೇಶದಿಂದ ರಾಜ್ಯಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸಭೆ ನಡೆಸಿದರು.

ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇ 21 ಹಾಗೂ 22 ರಂದು 15 ಸಾವಿರ ಶಿಕ್ಷಕರ ನೇಮಕಾತಿ ಉದ್ದೇಶದಿಂದ ರಾಜ್ಯಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದೆ. ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸುವ ಬಗ್ಗೆ ರೂಪರೇಷೆ ಸಿದ್ಧಪಡಿಸಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಓ ಹಾಗೂ ಎಸ್ಪಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದ್ದು, ಸಂಪೂರ್ಣ ಜವಾಬ್ದಾರಿ ಅವರಿಗೇ ನೀಡಲಾಗಿದೆ. ಶಿಕ್ಷಕರ ಪರೀಕ್ಷೆಗೆ 1,06, 083 ಅಭ್ಯರ್ಥಿಗಳು ನೋಂದಣಿಯಾಗಿದ್ದು, ರಾಜ್ಯದ 435 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೆ ಅಕ್ರಮಕ್ಕೆ ಆಸ್ಪದ ನೀಡದಂತೆ ಬಾರಿ ಎಚ್ಚರಿಕೆ ವಹಿಸಲಾಗಿದೆ. ಪರೀಕ್ಷಾ ಕೊಠಡಿಗೆ ತಂತ್ರಜ್ಞಾನ ಉಪಕರಣಗಳು, ವಾಚ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿಷೇಧ ಹೇರಲಾಗಿದೆ. ಅಕ್ರಮ ತಡೆಗಟ್ಟುವ ಕುರಿತಂತೆ ತಜ್ಞರು ಮತ್ತು ಪೊಲೀಸರು ನೀಡುವ ಸಲಹೆಗಳನ್ನು ಪಾಲನೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳು ಇನ್ನು ಮುಂದೆ ಕಡ್ಡಾಯವಾಗಿ ವಾಚ್ ಧರಿಸಿ ಪರೀಕ್ಷಾ ಕೊಠಡಿಗೆ ಬರುವಂತಿಲ್ಲ, ಮೊಬೈಲ್‌ ತರುವಂತಿಲ್ಲ ಹಾಗೂ ಪರೀಕ್ಷಾ ಕೊಠಡಿ ಸುತ್ತಮುತ್ತ ಬ್ಲೂ ಟೂತ್ ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಮಾರ್ಗಸೂಚಿಗಳು…

ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಮೊಬೈಲ್, ವಾಚ್, ಎಲೆಕ್ಟ್ರಾನಿಕ್‌ ಉಪಕರಣ ತರುವಂತಿಲ್ಲ-ಪ್ರತಿ ಕೇಂದ್ರಕ್ಕೂ ಗಡಿಯಾರದ ವ್ಯವಸ್ಥೆ
ಪರೀಕ್ಷಾ ಕೇಂದ್ರಗಳಲ್ಲಿ ಎರಡು ರೀತಿ ಪರಿಶೀಲನಾ ವ್ಯವಸ್ಥೆ-ಪೊಲೀಸರಿಂದ, ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಒಂದು ಗಂಟೆ ಮುಂಚೆ ಬರಬೇಕು, ಒಂದು ಕೊಠಡಿಗೆ 20 ಅಭ್ಯರ್ಥಿಗಳು ಕೂರಲು ಅವಕಾಶ
ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಕೆ, ಸಿಸಿ ಟಿವಿ ಮಾನಿಟರ್ ಮಾಡಲು ವಿಶೇಷ ತಂಡ ರಚನೆ
ಪರೀಕ್ಷೆಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟ
ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟಿವ್ ಅಳವಡಿಕೆಗೆ ಕ್ರಮ.
ಪ್ರತಿ ಜಿಲ್ಲೆಗೆ ಡಿಸಿ, ಸಿಇಓ, ಎಸ್ಪಿ ನೇತೃತ್ವದಲ್ಲಿ ಸಮಿತಿ ನೇಮಕ. ಈ ಸಮಿತಿಗೆ ಪರೀಕ್ಷೆ ಸಂಪೂರ್ಣ ಜವಾಬ್ದಾರಿ
ಪ್ರತಿ ಜಿಲ್ಲೆಗಳಲ್ಲಿ ಸ್ಕ್ವಾಡ್‌ ವ್ಯವಸ್ಥೆ-ಪ್ರತಿ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ
ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳ ಬಳಕೆ, ಆ ಶಾಲಾ ಶಿಕ್ಷಕರನ್ನು ಪರೀಕ್ಷೆಗೆ ಬಳಸಿಕೊಳ್ಳುವಂತಿಲ್ಲ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement