ಮೈಸೂರು ಮೃಗಾಲಯದಲ್ಲಿ 3 ಮರಿಗಳಿಗೆ ಜನ್ಮನೀಡಿದ ಬಿಳಿಹುಲಿ

ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಒಂಬತ್ತು ವರ್ಷಗಳ ಬಳಿಕ ಬಿಳಿಹುಲಿಯೊಂದು ಮೂರು ಮರಿಗಳಿಗೆ ಜನ್ಮನೀಡಿದೆ. ತಾಯಿ ಮತ್ತು ಮೂರು ಮರಿಗಳು ಆರೋಗ್ಯವಾಗಿವೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಮೈಸೂರು ಮೃಗಾಲಯದ ಹೆಣ್ಣು ಹುಲಿ ತಾರಾ ಹಾಗೂ ಗಂಡು ಹುಲಿ ರಾಕಿ ಜೋಡಿಗೆ ಮೂರು ಮರಿಗಳು ಜನಿಸಿವೆ. ತಾರಾ ಎಪ್ರಿಲ್‌ 26ರಂದು ಮೂರು ಮರಿಗಳಿಗೆ ಮೃಗಾಲಯದ … Continued

ಅಲಹಾಬಾದ್ ಹೈಕೋರ್ಟ್ ನಲ್ಲಿ ವಕೀಲರ ಪ್ರತಿಭಟನೆಯಿಂದಾಗಿ ತಾಜ್ ಮಹಲ್ ಇತಿಹಾಸ ಪ್ರಕರಣದ ವಿಚಾರಣೆ ಮೇ 12ಕ್ಕೆ ಮುಂದೂಡಿಕೆ

ಲಕ್ನೋ: ವಕೀಲರು ಕಲಾಪದಿಂದ ದೂರ ಉಳಿದ ಕಾರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ತಾಜ್ ಮಹಲ್ ಇತಿಹಾಸದ ಸತ್ಯಶೋಧನೆ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ (ಮೇ ೧೨ ಮುಂದೂಡಲಾಗಿದೆ. ಬಿಜೆಪಿಯ ಅಯೋಧ್ಯೆ ಘಟಕದ ಮಾಧ್ಯಮ ಉಸ್ತುವಾರಿ ರಜನೀಶ್ ಸಿಂಗ್ ಅವರು ಹೈಕೋರ್ಟ್‌ನ ಲಕ್ನೋ ಪೀಠದ ರಿಜಿಸ್ಟ್ರಿಯಲ್ಲಿ ಶನಿವಾರ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ … Continued

ಕುತುಬ್ ಮಿನಾರ್‌ಗೆ ವಿಷ್ಣು ಸ್ತಂಭ ಎಂದು ಮರುನಾಮಕರಣಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳಿಂದ ಮತಪ್ರದರ್ಶನ

ನವದೆಹಲಿ: ಮಂಗಳವಾರ ದೆಹಲಿಯ ಕುತುಬ್ ಮಿನಾರ್‌ಗೆ ಹಿಂದೂ ಸಂಘಟನೆಗಳು ಪ್ರದರ್ಶನ ನಡೆಸಿ, ಸ್ಮಾರಕವನ್ನು ವಿಷ್ಣು ಸ್ತಂಭ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದರು. ಮಹಾಕಾಲ್ ಮಾನವ ಸೇವಾ ಮತ್ತು ಇತರ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಗುರುತಿಸಿರುವ ಕುತುಬ್ ಮಿನಾರ್‌ನಲ್ಲಿ ಭಾರೀ ಪೊಲೀಸ್ ನಿಯೋಜನೆಯ ನಡುವೆ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಈ … Continued

ಮೇ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನ ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಬಿ.ಸಿ ನಾಗೇಶ ಮಾಹಿತಿ ನೀಡಿದ್ದಾರೆ. ಈ ಕುರಿತು ನಗರದಲ್ಲಿ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3ನೇ … Continued

ಶ್ರೀಲಂಕಾದಲ್ಲಿ ಪರಿಸ್ಥಿತಿ ವಿಕೋಪಕ್ಕೆ- ನೌಕಾನೆಲೆಗೆ ಪಲಾಯನ ಮಾಡಿದ ಮಾಜಿ ಪ್ರಧಾನಿ-ಕುಟುಂಬ, ಆಡಳಿತ ಪಕ್ಷದ ನಾಯಕರ 41 ಮನೆಗಳನ್ನು ಸುಟ್ಟು ಹಾಕಿದ ಪ್ರತಿಭಟನಾಕಾರರು: ವರದಿ

ಕೊಲಂಬೊ: ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬವು ದ್ವೀಪ ರಾಷ್ಟ್ರದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಮಾರಣಾಂತಿಕ ಪ್ರತಿಭಟನೆಗಳು ಮುಂದುವರೆದಿವೆ. ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ವಿಷಯದ … Continued

ಕರ್ನಾಟಕದ 7 ಪರಿಷತ್‌ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು: ಜೂನ್ 14ಕ್ಕೆ ಕೊನೆಗೊಳ್ಳುತ್ತಿರುವ ಕರ್ನಾಟಕ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳ ಅವಧಿಯು ಜೂನ್ 14ರಂದು ಕೊನೆಗೊಳ್ಳಲಿದ್ದು, ಈ ಸ್ಥಾನಗಳಿಗೆ ಜೂನ್ 3ರಂದು ಮತದಾನ … Continued

ಬಿಜೆಪಿ ನಾಯಕ ತಜಿಂದರ್ ಬಗ್ಗಾಗೆ ರಿಲೀಫ್‌ ನೀಡಿದ ಹೈಕೋರ್ಟ್ : ಜುಲೈ 5ರ ವರೆಗೆ ಬಂಧನಕ್ಕೆ ನಿರ್ಬಂಧ

ಚಂಡಿಗಡ: ತಜಿಂದರ್ ಪಾಲ್ ಸಿಂಗ್ ಬಗ್ಗಾ ಅವರಿಗೆ ಪ್ರಮುಖ ನಿರಾಳತೆಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಪಂಜಾಬ್ ಸರ್ಕಾರವನ್ನು ಜುಲೈ 5 ರವರೆಗೆ ಬಿಜೆಪಿ ನಾಯಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ನಿರ್ಬಂಧಿಸಿದೆ. ಕಳೆದ ವಾರ ಮೊಹಾಲಿ ನ್ಯಾಯಾಲಯವು ತನ್ನ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಬಗ್ಗಾ ಸಲ್ಲಿಸಿದ್ದ ಅರ್ಜಿಯ … Continued

ಮೇರು ಸಂಗೀತಗಾರ, ಸಂತೂರ್‌ ಮಾಂತ್ರಿಕ ಪದ್ಮವಿಭೂಷಣ ಪಂಡಿತ್ ಶಿವಕುಮಾರ ಶರ್ಮಾ ವಿಧಿವಶ

ನವದೆಹಲಿ: ಹಿಂದೂಸ್ತಾನೀ ಸಂಗೀತದ ಸಂತೂರ್ ಮಾಂತ್ರಿಕ ಹಾಗೂ ಸಂಗೀತ ಸಂಯೋಜಕ ಪದ್ಮವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಳೆದ ಆರು ತಿಂಗಳಿಂದ ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು. ಅವರು ಅವರು ಮೇ 15 ರಂದು ಭೋಪಾಲ್ ಲೈವ್ ಕನ್ಸರ್ಟ್‌ನಲ್ಲಿ ಕೊಳಲು ದಂತಕಥೆ … Continued

ಮೇ 13ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಜಲಧಾರೆ ಸಮಾರೋಪ ಸಮಾರಂಭ, 4 ಲಕ್ಷ ಜನ ಸೇರುವ ನಿರೀಕ್ಷೆ: ಎಚ್‌ಡಿಕೆ

ಬೆಂಗಳೂರು: ಜೆಡಿಎಸ್ ‘ಜನತಾ ಜಲ ಧಾರೆ’ ಸಮಾರೋಪ ಸಮಾರಂಭ ಮೇ 13 ರಂದು ನಡೆಯಲಿದ್ದು, 4 ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ ನದಿಗಳ ನೀರನ್ನು ಸಂಗ್ರಹಿಸಿ ಆರಂಭ … Continued

10 ರಾಜ್ಯಗಳಲ್ಲಿ ಹಿಂದುಗಳು ಅಲ್ಪಸಂಖ್ಯಾತರೇ? ಮಂಗಳವಾರ ಸುಪ್ರೀಂಕೋರ್ಟ್‌ನಿಂದ ವಿಚಾರಣೆ

ನವದೆಹಲಿ: ಅಲ್ಪಸಂಖ್ಯಾತರ ಎಂದು ಅಧಿಸೂಚನೆ ಹೊರಡಿಸುವ ಅಧಿಕಾರ ಕೇಂದ್ರ ಸರಕಾರಕ್ಕೆ ಇದೆ ಮತ್ತು ಈ ಸಂಬಂಧ ಯಾವುದೇ ನಿರ್ಧಾರವನ್ನಾದರೂ ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಚರ್ಚಿಸಿದ ನಂತರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 10 ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ ಎಂದು ವಾದಿಸಿ ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶನಗಳನ್ನು … Continued