ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

posted in: ರಾಜ್ಯ | 0

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರಾಜಕೀಯ ಸ್ಥಿತಿಗತಿಗಳು ಹಾಗೂ ಸಚಿವ ಸಂಪುಟದ ಬಗ್ಗೆ ಚರ್ಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ವಿಚಾರದಲ್ಲಿ ಸರ್ವೋಚ್ಚ ನ್ಯಾಯಾಲಯದ ಆದೇಶದ ಪರಿಣಾಮಗಳೇನು, ಚುನಾವಣಾ ಆಯೋಗದ ನಿರ್ಧಾರ, ಸಚಿವ ಸಂಪುಟದ ವಿಸ್ತರಣೆ ಇವೆಲ್ಲವುಗಳ ತೀರ್ಮಾನಗಳೆಲ್ಲವನ್ನೂ ಬಿ.ಜೆ.ಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಅವರು ಒಂದು ರಾಜಕೀಯ ಪಕ್ಷವಾಗಿ ತೀರ್ಮಾನ ಮಾಡಬೇಕಾಗುತ್ತದೆ. ರಾಜ್ಯದ ಸ್ಥಿತಿಗತಿಗಳನ್ನು ಹೇಳಿದ್ದೇನೆ. ಮುಂದಿನ ಒಂದು ವಾರ ನಿರ್ಣಾಯಕ. ಸ್ಥಳೀಯ ಸಂಸ್ಥೆಗಳ ಚುನಾವಣೆ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ, ಪಕ್ಷದಲ್ಲಿ ಆಯಾ ರಾಜ್ಯದ ಸ್ಥಿತಿ ಗತಿಯ ಮೇಲೆ ನಿರ್ಣಯಗಳಾಗುತ್ತದೆ. ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿ ಪರಿಣಮಿಸಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಈ ಚುನಾವಣೆಗಳು ನಡೆಯಬೇಕಿರುವುದರಿಂದ ಹೆಚ್ಚಿನ ಗಮನ ನೀಡುವಂತೆ ಅಮಿತ್ ಶಾ ಸೂಚಿಸಿದ್ದಾರೆ. ಎರಡು ಮೂರು ದಿವಸಗಳ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ಹೇಳುವುದಾಗಿ ತಿಳಿಸಿದ್ದಾರೆ. ನಡ್ಡಾ ಅವರೊಂದಿಗೆ ಅಂತಿಮವಾಗಿ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದರು.
.

ಓದಿರಿ :-   ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ, ಡಿಕೆಶಿ ಸೇರಿ 29 ನಾಯಕರಿಗೆ ಕೋರ್ಟ್​ ಸಮನ್ಸ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ