ಇಂದಿನಿಂದ Google Play Store ಇಂದ ಎಲ್ಲ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳಿಗೆ ನಿಷೇಧ

ಬಹಳ ದಿನಗಳಿಂದಲೂ ಗೂಗಲ್ ತನ್ನ ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಇದೀಗ ಗೂಗಲ್‌ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.
ಮೇ 11ರ ಬಳಿಕ ಅಂದರೆ ಇಂದಿನಿಂದ ಅಂಡ್ರಾಯ್ಡ್‌ ಫೋನ್‌ ಬಳಕೆದಾರರು ಅಪ್ಲಿಕೇಶನ್ ಬಳಸಿ ಕರೆ ರೆಕಾರ್ಡ್‌ (Call recording) ಮಾಡಲು ಸಾಧ್ಯವಾಗುವುದಿಲ್ಲ.
ಅಂಡ್ರಾಯ್ಡ್‌ನಲ್ಲಿ ಸುರಕ್ಷತೆ ಮತ್ತು ಗೌಪ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗೂಗಲ್‌ ಹಲವಾರು ಕ್ರಮಗಳಿಗೆ ಮುಂದಾಗಿದ್ದು, ಕಾಲ್‌ ರೆಕಾರ್ಡಿಂಗ್‌ ಅವಕಾಶ ನೀಡುವ ಅಪ್ಲಿಕೇಷನ್‌ಗಳನ್ನು ನಿರ್ಬಂಧಿಸಲಿದೆ. ಈ ಹೊಸ ನೀತಿಯನ್ನು ಹೇಗೆ ಕಾರ್ಯಗತಗೊಳಿಸಲು ಗೂಗಲ್‌ (Google) ಪ್ಲಾನ್‌ ಮಾಡಿದೆ ಎನ್ನುವುದು ಬಹಿರಂಗವಾಗಿಲ್ಲ.

ಅಂದರೆ, ಗೂಗಲ್‌ ತನ್ನ ಪ್ಲೇ ಸ್ಟೋರ್‌ನಲ್ಲಿ ಎಲ್ಲ ಥರ್ಡ್‌ ಪಾರ್ಟಿ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬ್ಯಾನ್‌ ಮಾಡಲಿದೆಯೇ ಅಥವಾ ಪ್ಲಾಟ್‌ಫಾರ್ಮ್‌ನಿಂದ ತಮ್ಮ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಡೆವಲಪರ್‌ಗಳನ್ನು ಕೇಳುತ್ತದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದರಲ್ಲಿ ಟ್ರೂ ಕಾಲರ್ (True Caller) ಕೂಡ ಒಳಗೊಂಡಿದೆ. ಬಹಳ ದಿನಗಳಿಂದಲೂ ಗೂಗಲ್ ತನ್ನ ಅಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಥರ್ಡ್ ಪಾರ್ಟಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್​ಗಳನ್ನು ಮಿತಿಗೊಳಿಸಲು ಪ್ರಯತ್ನಿಸುತ್ತಿತ್ತು. ಈಗ ಅದನ್ನು ಜಾರಿಗೆ ತರಲು ನಿರ್ಧರಿಸಿದೆ.

ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಬಳಕೆದಾರರ ಗೌಪ್ಯತೆಯ ಮೇಲೆ ಆಕ್ರಮಣ ಎಂದು ಪರಿಗಣಿಸಿ ಗೂಗಲ್ ಇಂತಹದೊಂದು ಮಹತ್ತರ ಬದಲಾವಣೆಗೆ ಕೈ ಹಾಕಿದೆ ಎಂದು ಹೇಳಲಾಗುತ್ತಿದೆ. ಟ್ರೂ ಕಾಲರ್‌ ಈಗಾಗಲೇ ಗ್ರಾಹಕರ ಬೇಡಿಕೆಯಂತೆ ಎಲ್ಲಾ ಅಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಿಗೆ ಕರೆ ರೆಕಾರ್ಡಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿದೆ. ಆದರೆ ಇದೀಗ ಗೂಗಲ್‌ ಡೆವಲಪರ್ ಪ್ರೋಗ್ರಾಂ ನೀತಿಗಳ ಪ್ರಕಾರ, ಇನ್ಮುಂದೆ ಟ್ರೂ ಕಾಲರ್‌ ಕಾಲ್‌ ರೆಕಾರ್ಡಿಂಗ್ ಅನ್ನು ಸ್ಟಾಪ್‌ ಮಾಡಲಿದೆ.
ಆದರೆ ಎಲ್ಲ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳನ್ನು ಪ್ಲಾಟ್‌ಫಾರ್ಮ್‌ನಿಂದ ಬ್ಯಾನ್‌ ಆಗುವುದಿಲ್ಲ. ಅಂದರೆ ಒನ್‌ಪ್ಲಸ್‌, ಶಿಯೋಮಿ ಮತ್ತು ಸ್ಯಾಮ್‌ಸಂಗ್‌ ಕಂಪೆನಿಗಳು ನೀಡುವ ಇಂಟರ್‌ಬಿಲ್ಟ್‌ ಕಾಲ್‌ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಬ್ಯಾನ್‌ ಆಗುವುದಿಲ್ಲ ಹಾಗೂ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಲ್ಲಿ ಗೂಗಲ್‌ನ ಸ್ವಂತ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.

ಕಳೆದ ಕೆಲ ವರ್ಷಗಳಿಂದ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಮತ್ತು ಸೇವೆಗಳ ವಿರುದ್ಧ ಗೂಗಲ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ವರ್ಷಗಳ ಹಿಂದೆ, Android 6 ನಲ್ಲಿ ಗೂಗಲ್ ನೈಜ-ಸಮಯದ ಕರೆ ರೆಕಾರ್ಡಿಂಗ್ ಅನ್ನು ನಿರ್ಬಂಧಿಸಿತ್ತು ಮತ್ತು Android 10 ನೊಂದಿಗೆ ಮೈಕ್ರೊಫೋನ್‌ನಲ್ಲಿ ಕರೆ ರೆಕಾರ್ಡಿಂಗ್ ಸಹ ನಿರ್ಬಂಧಿಸಿತ್ತು. ಇದಾದ ನಂತರ Android 10 ಮತ್ತು ನಂತರದ ಆವೃತ್ತಿಗಳೊಂದಿಗೆ ಕರೆಗಳನ್ನು ರೆಕಾರ್ಡ್ ಮಾಡಲು ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳು ಇಲ್ಲಿ ಪ್ರವೇಶವನ್ನು ಪ್ರಾರಂಭಿಸಿದ್ದವು. ಆದರೆ, ಗೂಗಲ್ ಇದೀಗ ತನ್ನ ನೀತಿಯನ್ನು ನವೀಕರಿಸಿರುವುದರಿಂದ, ಇನ್ಮುಂದೆ ಥರ್ಡ್ ಪಾರ್ಟಿ ವ್ಯಕ್ತಿಗಳಿಂದ ಅಭಿವೃದ್ಧಿಪಡಿಸಲಾದ ಧ್ವನಿ ಕರೆ ರೆಕಾರ್ಡಿಂಗ್ ಅಪ್ಲಿಕೇಶನ್‌ಗಳು ಕರೆಗಳನ್ನು ರೆಕಾರ್ಡ್ ಮಾಡಲು ಸಾಧ್ಯವಾಗುವುದಿಲ್ಲ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement