ಬೆಳಗಾವಿ: ಶರದ್‌ ಪವಾರ್‌ ಸಮ್ಮುಖದಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್‌ನವರು

ಬೆಳಗಾವಿ : ಎಂಇಎಸ್‌ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ.

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್‌ನ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶರದ್ ಪವಾರ್ ಭಾಷಣ ಆರಂಭವಾಗುತ್ತಿದ್ದಂತೆ ಎಂಇಎಸ್‌ನವರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿಯನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದರು.
ಅವರು ನಾಡದ್ರೋಹಿ ಘೋಷಣೆ ಕೂಗುವ ವೇಳೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಮ್ಮನೆ ನಿಂತರು. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ, ಕೃಷ್ಣ ಮೊಪಸೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್‌ಸಿಪಿ ಕಾರ್ಯಕರ್ತರಿಂದ  ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ :

ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಕಟ್ಟೆಗೆ ಶೂ ಧರಿಸಿ ಎನ್​​ಸಿಪಿ ಕಾರ್ಯಕರ್ತರು ಮಾಲಾರ್ಪಣೆ ಮಾಡಿದ ಘಟನೆ ನಡೆಯಿತು. ಬೆಳಗಾವಿ ಪ್ರವಾಸದಲ್ಲಿರುವ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್‌ಸಿಪಿ ನಾಯಕ ಶರದ್‌ ಪವಾರ್​ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೋರಲಾಯಿತು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement