“ಕೆಲಸದತ್ತ ನಿರ್ಲಕ್ಷ್ಯ: ಡಿಜಿಪಿ ಸ್ಥಾನದಿಂದ ತೆರವುಗೊಳಿಸಿದ ಉತ್ತರ ಪ್ರದೇಶ ಸರ್ಕಾರ

ಲಕ್ನೋ: ತಮ್ಮ ಕೆಲಸವನ್ನು ನಿರ್ಲಕ್ಷಿಸಿದ ಕಾರಣಕ್ಕಾಗಿ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಮುಕುಲ್ ಗೋಯೆಲ್ ಅವರನ್ನು ಬುಧವಾರ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಅವರನ್ನು ನಾಗರಿಕ ರಕ್ಷಣಾ ಇಲಾಖೆಯ ಮಹಾನಿರ್ದೇಶಕ(ಡಿಜಿ)ರನ್ನಾಗಿ ಮಾಡಲಾಗಿದೆ ಎಂದು ಅದು ಹೇಳಿದೆ. ಅಧಿಕೃತ ಕೆಲಸವನ್ನು ನಿರ್ಲಕ್ಷಿಸಿದ ಮತ್ತು ಇಲಾಖಾ ಕಾರ್ಯಗಳಲ್ಲಿ ಆಸಕ್ತಿ ವಹಿಸದ ಕಾರಣಕ್ಕಾಗಿ ಗೋಯೆಲ್ ಅವರನ್ನು ಡಿಜಿಪಿ ಹುದ್ದೆಯಿಂದ ತೆರವುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
1987ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಗೋಯೆಲ್ ಅವರನ್ನು ಕಳೆದ ವರ್ಷ ಜೂನ್‌ನಲ್ಲಿ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ನೇಮಿಸಲಾಗಿತ್ತು.ರಾಜ್ಯದಲ್ಲಿ ಹೊಸ ಡಿಜಿಪಿ ನೇಮಕವಾಗುವವರೆಗೆ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರಿಗೆ ಹೆಚ್ಚುವರಿ ಡಿಜಿಪಿ ಉಸ್ತುವಾರಿ ನೀಡಲಾಗಿದೆ.

4.5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್

ನಿಮ್ಮ ಕಾಮೆಂಟ್ ಬರೆಯಿರಿ

advertisement