ಹರ್ಷ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಕೊಲೆ ಪ್ರಕರಣಕ್ಕೆ ಸಂಂಧಿಸಿದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ … Continued

ಮಹಿಳೆ ಶವ ಬೈಕ್‌ನಲ್ಲಿ ಸಾಗಿಸುತ್ತಿದ್ದಾಗ ಅಪಘಾತ: ಕೊಲೆಯ ರಹಸ್ಯ ಬಯಲು

ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ನಾಲ್ವರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ ನಾಗರಾಜು, ವಿನೋದ ಎಂಬವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತನಿಗಾಗಿ … Continued

ಹಿಮಾಚಲ ಅಸೆಂಬ್ಲಿ ಗೇಟ್‌ಗಳಿಗೆ ಖಲಿಸ್ತಾನಿ ಧ್ವಜ ಅಂಟಿಸಿದ ಆರೋಪ: ಪಂಜಾಬ್‌ನ ವ್ಯಕ್ತಿಯ ಬಂಧನ

ಶಿಮ್ಲಾ: ಹಿಮಾಚಲ ಪ್ರದೇಶ ಪೊಲೀಸರು ಭಾನುವಾರ ಧರ್ಮಶಾಲಾದ ಹಿಮಾಚಲ ಪ್ರದೇಶ ವಿಧಾನಸಭೆ ಕಟ್ಟಡದ ಮುಖ್ಯ ಗೇಟ್ ಮತ್ತು ಗೋಡೆಗಳ ಮೇಲೆ ಖಲಿಸ್ತಾನ್ ಧ್ವಜಗಳನ್ನು ಹಾಕಿದ್ದಕ್ಕಾಗಿ ಮೇ 11ರಂದು ಬುಧವಾರ ಪಂಜಾಬ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ಹಿಮಾಚಲದ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಪಂಜಾಬ್‌ನಿಂದ ಹರ್ವಿರ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು … Continued

ಭಂಡಾರಾ ಜಿಪಂ ಅಧ್ಯಕ್ಷರ ಚುನಾವಣೆ: ಬಿಜೆಪಿ ಜೊತೆ ಕೈಜೋಡಿಸಿದ ಎನ್‌ಸಿಪಿ- ಕಾಂಗ್ರೆಸ್‌ಗೆ ಬೆನ್ನಿಗೆ ಚೂರಿ ಹಾಕಿದ ಎನ್‌ಸಿಪಿ ಎಂದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ

ಮುಂಬೈ: ಭಂಡಾರಾ ಜಿಲ್ಲಾ ಪಂಚಾಯತ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸುವ ಮೂಲಕ ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಪಾಲುದಾರ ಎನ್‌ಸಿಪಿ “ಬೆನ್ನು ಚೂರಿ ಹಾಕಿದೆ” ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ. ಟ್ವಿಟರ್‌ನಲ್ಲಿ ಮರಾಠಿಯಲ್ಲಿ ಟ್ವೀಟ್ ಮಾಡಿರುವ ನಾನಾ ಪಟೋಲೆ, ‘ಬಿಜೆಪಿ ಜೊತೆ ಸ್ನೇಹದ ಹಸ್ತ ಚಾಚಿ ಎನ್‌ಸಿಪಿ ನಮ್ಮ ಬೆನ್ನಿಗೆ ಚೂರಿ … Continued

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದ ಜ್ಞಾನವಾಪಿ ಮಸೀದಿ ಸಮೀಕ್ಷೆ: ಇಂದು ನಿರ್ಧಾರ

ವಾರಾಣಸಿ: ಐತಿಹಾಸಿಕ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಾರಣಾಸಿಯ ನ್ಯಾಯಾಲಯವು ಇಂದು ತೀರ್ಪು ನೀಡಲಿದೆ. ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಹಿಂದೂ ದೇಗುಲದಲ್ಲಿ ವರ್ಷಪೂರ್ತಿ ಪ್ರಾರ್ಥನೆ ಸಲ್ಲಿಸಲು ಐದು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಗಳ ಮೇಲೆ ನ್ಯಾಯಾಲಯವು ಈ ವರ್ಷದ ಏಪ್ರಿಲ್‌ನಲ್ಲಿ ಪರಿಶೀಲನೆಗೆ ಆದೇಶಿಸಿತ್ತು. … Continued