ಜಮ್ಮು: ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿ: 4 ಜನರು ಸಾವು, 22 ಜನರಿಗೆ ಗಾಯ

ಶ್ರೀನಗರ: ಮಾತಾ ವೈಷ್ಣೋದೇವಿ ದೇಗುಲ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್‌ಗೆ ಬೆಂಕಿ ತಗುಲಿ ನಾಲ್ವರು ಸಜೀವವಾಗಿ ದಹನವಾಗಿದ್ದಾರೆ ಹಾಗೂ 22 ಜರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನದೊಳಗೆ ನಿಗೂಢ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಭಯೋತ್ಪಾದನೆ ಕೃತ್ಯ ಅಲ್ಲ ಎಂದು ಹೇಳಿದ್ದಾರೆ. ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಕತ್ರಾದಿಂದ 1 ಕಿ.ಮೀ ದೂರಕ್ಕೆ ತೆರಳಿದ ನಂತರ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಸಂಭವನೀಯ ಕಾರಣವನ್ನು ಕಂಡುಹಿಡಿಯಲಾಗುತ್ತಿದ್ದು, ಎಫ್‌ಎಸ್‌ಎಲ್ ತಂಡವನ್ನು ಸ್ಥಳದಲ್ಲೇ ನಿಯೋಜಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ ತಿಳಿಸಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕತ್ರಾಕ್ಕೆ ರವಾನಿಸಲಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಲಾಗಿದೆ. ಜಮ್ಮುವಿನ ಎಡಿಜಿಪಿ ಪ್ರಕಾರ, ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿರುವಾಗ ಸಾವಿಗೀಡಾಗಿದ್ದಾರೆ. ತೀವ್ರ ಸುಟ್ಟ ಗಾಯಗಳಾಗಿರುವ ಮೂವರು ಪ್ರಯಾಣಿಕರನ್ನು ವಿಶೇಷ ಚಿಕಿತ್ಸೆಗಾಗಿ ಶಿಫಾರಸು ಮಾಡಲಾಗಿದೆ.

ಓದಿರಿ :-   ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಬಲವಂತದ ಮತಾಂತರ: ಸಿಬಿಐ-ಎನ್‌ಐಎ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ