ಬೆಂಗಳೂರು: ಯುವತಿಗೆ ಆಸಿಡ್ ಎರಚಿ ನಾಪತ್ತೆಯಾಗಿದ್ದ ಆರೋಪಿ ನಾಗೇಶನನ್ನು ಬರೋಬ್ಬರಿ ಮೂರು ವಾರಗಳ ನಂತರ ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಏ.28ರಂದು ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆಶ್ರಮದಲ್ಲಿ ಕಾವಿ ಬಟ್ಟೆ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಗೇಶ, ಸುಂಕದಕಟ್ಟೆ ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ. ಪೊಲೀಸರಿಗೆ ಸಿಗದೆ ತಪ್ಪಿಸಿಕೊಂಡಿದ್ದ ನಾಗೇಶ 16 ದಿನಗಳ ಬಳಿಕ ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಘಟನೆ ಹಿನ್ನೆಲೆ
ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ 23 ವರ್ಷದ ಯುವತಿಯ ಮೇಲೆ ಸುಂಕದಕಟ್ಟೆಯ ಮುತ್ತೂಟು ಫಿನ್‌ಕಾರ್ಪ್ ಬಳಿ ಪಾಗಲ್ ಪ್ರೇಮಿ ನಾಗೇಶ ಆಸಿಡ್ ಎರಚಿ ಪರಾರಿಯಾಗಿದ್ದ. ನಾಗೇಶ ಈ ಯುವತಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಯುವತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಆತ ಆಸಿಡ್ ಎರಚಿ ಪರಾರಿಯಾಗಿದ್ದ ಎಂದು ಹೇಳಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ