ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ.

ಅಸಾನಿ ಚಂಡಮಾರುತವು ಕ್ಷೀಣವಾಗಿದ್ದು, ನಿರೀಕ್ಷೆಯಂತೆ ಅದರ ಪ್ರಭಾವ ಕಡಿಮೆಯಾಗತೊಡಗಿದೆ.ನಾಳೆಯಿಂದ ಮೋಡದ ಪ್ರಮಾಣ ಕಡಿಮೆಯಾಗಲಿದ್ದು, ಬಿಸಿಲಿನ ವಾತಾವರಣ ಕಂಡುಬರಲಿದೆ. ಆದರೂ ಆಗಾಗ್ಗೆ ಕೆಲವೆಡೆ ಹಗುರ ಇಲ್ಲವೆ ಸಾಧಾರಣ ಮಳೆ ಮುಂದುವರಿಯಲಿದೆ.
ಕ್ಷೀಣಗೊಂಡ ನಂತರ ಪುನಾರಚನೆಯಾಗಿ ಮತ್ತೆ ಚಂಡಮಾರುತದ ಸ್ವರೂಪ ಪಡೆಯಲಿದೆಯೇ ಅಥವಾ ಇಲ್ಲವೆ ಎಂಬುದನ್ನು ಇನ್ನೆರಡು ದಿನ ಕಾದು ನೋಡಬೇಕು. ಅಸಾನಿ ಚಂಡಮಾರುತದಿಂದಾಗಿ ನೈಋತ್ಯ ಮುಂಗಾರು ಅವಧಿಗಿಂತ ಮುಂಚೆಯೇ ಆಗಮಿಸುವ ಸೂಚನೆಗಳು ಕಂಡುಬರುತ್ತಿವೆ.

ಸಾಮಾನ್ಯವಾಗಿ ಜೂ.1ರಂದು ಕೇರಳ, ಕರಾವಳಿಯನ್ನು ಮುಂಗಾರು ಪ್ರವೇಶಿಸುತ್ತಿದ್ದು, ಆನಂತರ ನಾಲ್ಕೈದು ದಿನಗಳಲ್ಲಿ ರಾಜ್ಯ ಪ್ರವೇಶಿಸುವುದು ವಾಡಿಕೆ. ಬಳಿಕ ಎರಡು ವಾರದಲ್ಲಿ ಉತ್ತರ ಕರ್ನಾಟಕ ಪ್ರವೇಶಿಸುತ್ತಿತ್ತು. ಈ ವರ್ಷ ಅವಧಿಗಿಂತ ಎಷ್ಟು ದಿನ ಮುಂಚಿತವಾಗಿ ಮುಂಗಾರು ಪ್ರವೇಶಿಸಲಿದೆಯೇ ಎಂಬ ಪ್ರಶ್ನೆ ಮೂಡಿದೆ.
ಚಂಡಮಾರುತ ದುರ್ಬಲವಾಗಿದ್ದರೂ ಮೇ 17ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಭಾನುವಾರದಿಂದ ಮಂಗಳವಾದವರೆಗೂ ಸ್ವಲ್ಪ ಹೆಚ್ಚಿನ ಪ್ರಮಾಣದ ಮಳೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಭಾಗ ಹಾಗೂ ಒಳನಾಡಿನಲ್ಲಿ ಬೀಳುವ ಸಾಧ್ಯತೆಗಳು ಕಂಡುಬರುತ್ತಿವೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement