ರಾಹುಲ್ ಭಟ್ ಹತ್ಯೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ: ಜಮ್ಮು-ಕಾಶ್ಮೀರ ಆಡಳಿತ, ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರ ಆಡಳಿತವು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ರಾಹುಲ್ ಭಟ್ ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಕಾಶ್ಮೀರಿ ಪಂಡಿತ ರಾಹುಲ್ ಭಟ್ ಗುರುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಅವರ ಸಾವಿನ ನಂತರ ಕಾಶ್ಮೀರಿ ಪಂಡಿತ್ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಶುಕ್ರವಾರ, ಕಾಶ್ಮೀರ ಕಣಿವೆಯ 350 ಕ್ಕೂ ಹೆಚ್ಚು ಸರ್ಕಾರಿ ನೌಕರರು, ಎಲ್ಲಾ ಕಾಶ್ಮೀರಿ ಪಂಡಿತರು ತಮ್ಮ ರಾಜೀನಾಮೆ ಪತ್ರವನ್ನು ಜಮ್ಮು ಮತ್ತು ಕಾಶಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ಸಲ್ಲಿಸಿದ್ದಾರೆ. ಕಣಿವೆಯಲ್ಲಿ ತಾವು ಸುರಕ್ಷಿತವಾಗಿಲ್ಲ ಎಂದು ಉದ್ಯೋಗಿಗಳು ಹೇಳಿಕೊಂಡಿದ್ದಾರೆ.
ರಾಹುಲ್ ಭಟ್ ಸಾವಿನ ತನಿಖೆಗೆ ಅಧಿಕಾರಿಗಳು ಇದೀಗ ಎಸ್‌ಐಟಿ ರಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಆಡಳಿತವು ರಾಹುಲ್ ಭಟ್ ಅವರ ಪತ್ನಿಗೆ ಜಮ್ಮುವಿನಲ್ಲಿ ಸರ್ಕಾರಿ ಉದ್ಯೋಗವನ್ನು ನೀಡುವುದರ ಜೊತೆಗೆ ಕುಟುಂಬಕ್ಕೆ ಆರ್ಥಿಕ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದೆ.ಹಾಗೂ ಮಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಭರವಸೆ ನೀಡಿದೆ.

ಪ್ರಮುಖ ಸುದ್ದಿ :-   2 ಕ್ಷೇತ್ರಗಳಲ್ಲಿ ಒಂದೇ ಪಕ್ಷದ ತಲಾ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ;ತಾವೇ ಅಧಿಕೃತ ಅಭ್ಯರ್ಥಿಗಳೆಂದು ಹಕ್ಕು ಮಂಡನೆ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement