ದೆಹಲಿಯ ಮುಂಡ್ಕಾದಲ್ಲಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ: 27 ಮಂದಿ ಸಾವು

ನವದೆಹಲಿ: ಶುಕ್ರವಾರ ಸಂಜೆ 4:45 ರ ಸುಮಾರಿಗೆ ದೆಹಲಿಯ ಮುಂಡ್ಕಾದಲ್ಲಿರುವ ಕಚೇರಿ ಕಟ್ಟಡದಲ್ಲಿ ಭಾರಿ ಬೆಂಕಿ ಅನಾಹುತದಲ್ಲಿ 27 ಜನರು ಸಾವಿಗೀಡಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿಯವರೆಗೆ ಅನೇಕ ಜನರು ಇನ್ನೂ ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
40ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ, ಪ್ರದೇಶದ ವಿಸ್ತಾರವನ್ನು ಗಮನಿಸಿದರೆ ಇದು ಸಮಯ ತೆಗೆದುಕೊಳ್ಳುತ್ತದೆ” ಎಂದು ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡಾಗ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಕಚೇರಿ ಕಟ್ಟಡದ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟರು. ಸಂತ್ರಸ್ತರಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಆಂಬುಲೆನ್ಸ್ ಕೂಡ ಬೆಂಕಿ ಅನಾಹುತದ ಸ್ಥಳಕ್ಕೆ ತಲುಪಿತು.
ಪ್ರಾಥಮಿಕ ವಿಚಾರಣೆಯಲ್ಲಿ, ನಾಲ್ಕು ಅಂತಸ್ತಿನ ಕಟ್ಟಡವನ್ನು ಅನೇಕ ಕಂಪನಿಗಳಿಗೆ ಕಚೇರಿ ಸ್ಥಳವಾಗಿ ಬಳಸಲಾಗಿದೆ ಎಂದು ತಿಳಿದುಬಂದಿದೆ.
ಸಿಸಿಟಿವಿ ಕ್ಯಾಮೆರಾಗಳು ಮತ್ತು ರೂಟರ್‌ಗಳನ್ನು ತಯಾರಿಸುವ ಕಂಪನಿಯ ಕಚೇರಿಯಾಗಿ ಕಾರ್ಯನಿರ್ವಹಿಸುವ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಸಿಟಿವಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹಲವು ಕಾರ್ಮಿಕರು ಕಟ್ಟಡದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಕಂಪನಿಯ 50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ರಕ್ಷಿಸಲಾಗಿದೆ. ಈ ನಡುವೆ ಕಂಪನಿಯ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಮಲತಾ ಭೇಟಿ ಮಾಡಿದ ವಿಜಯೇಂದ್ರ : ಭೇಟಿ ನಂತರ ಸುಮಲತಾ ಹೇಳಿದ್ದೇನು..?

ಅತ್ಯಂತ ದುಃಖಕರ’: ಪ್ರಧಾನಿ ಮೋದಿ
“ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ದುಃಖತಪ್ತ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, “ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ದುರಂತದ ಬಗ್ಗೆ ತಿಳಿದು ಆಘಾತ ಮತ್ತು ನೋವಾಗಿದೆ. ನಾನು ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ನಮ್ಮ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ಮತ್ತು ಜೀವ ಉಳಿಸಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಹಾಗೂ ಎನ್‌ಡಿಆರ್‌ಎಫ್‌ (NDRF೦ ಶೀಘ್ರದಲ್ಲೇ ತಲುಪಲಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement