ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ರ ಪರೀಕ್ಷೆಗಳ ಫಲಿತಾಂಶಗಳನ್ನು ಮೇ 19ರಂದು ಪ್ರಕಟಿಸಲಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವು ಕೆಎಸ್‌ಇಇಬಿ ಬೋರ್ಡ್ ಅಧಿಕೃತ ಮಾಹಿತಿ ಲಭ್ಯವಾಗಲಿದೆ.
ಅದೇ ದಿ‌ನ ಶಾಲೆಗಳಲ್ಲಿ ಮತ್ತು ಇಲಾಖೆಯ ವೆಬ್​ಸೈಟ​ಲ್ಲಿ ಫಲಿತಾಂಶ ಪ್ರಕಟ ಆಗಲಿದೆ. ಮೇ 16ರಿಂದ ಶಾಲೆಗಳು ಓಪನ್​ ಆಗುತ್ತೆ ಎಂದರು. ಟ್ವೀಟ್​ ಮೂಲಕವೂ ಫಲಿತಾಂಶ ಪ್ರಕಟವಾಗುವ ದಿನಾಂಕ ಘೋಷಿಸಿದ್ದಾರೆ. ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗಿರಲಿಲ್ಲ. ಈಗ ಮೇ 19ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ನಾಗೇಶ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ.ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದು.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.

ಪ್ರಮುಖ ಸುದ್ದಿ :-   ಮಂಗಳೂರಲ್ಲಿ ಅಭೂತಪೂರ್ವ ರೋಡ್ ಶೋ : ಕರಾವಳಿ ಜನರ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement