ರಾಜ್ಯಸಭೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ನಾಳೆ, ಶುಕ್ರವಾರ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರುಮುಂದಿನ ತಿಂಗಳು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗಳಿಗೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಗುರುವಾರ ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರ ಜತೆ ಪ್ರಾಥಮಿಕ ಚರ್ಚೆಗಳನ್ನು ನಡೆಸಿದ್ದೇನೆ. ನಾಳೆ ನಡೆಯುವ ರಾಜ್ಯ ಬಿಜೆಪಿ ಕೋರ್‌ಕಮಿಟಿ ಸಭೆಯಲ್ಲಿ ಎಲ್ಲ ಪ್ರಮುಖ ಮುಖಂಡರ ಜತೆ ಚರ್ಚಿಸಿ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಬೇಕೆಂಬುದು ನಮ್ಮ ಆಶಯವಾಗಿದೆ. ಮೂರು ತಿಂಗಳ ಕಾಲಾವಕಾಶ ಕೋರಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement