ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶನನ್ನು ಕೊನೆಗೂ ಬಂಧಿಸಿದ ಪೊಲೀಸರು

ಬೆಂಗಳೂರು: ಯುವತಿಗೆ ಆಸಿಡ್ ಎರಚಿ ನಾಪತ್ತೆಯಾಗಿದ್ದ ಆರೋಪಿ ನಾಗೇಶನನ್ನು ಬರೋಬ್ಬರಿ ಮೂರು ವಾರಗಳ ನಂತರ ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಏ.28ರಂದು ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆಶ್ರಮದಲ್ಲಿ ಕಾವಿ ಬಟ್ಟೆ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. … Continued

ಜಮ್ಮು: ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿ: 4 ಜನರು ಸಾವು, 22 ಜನರಿಗೆ ಗಾಯ

ಶ್ರೀನಗರ: ಮಾತಾ ವೈಷ್ಣೋದೇವಿ ದೇಗುಲ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್‌ಗೆ ಬೆಂಕಿ ತಗುಲಿ ನಾಲ್ವರು ಸಜೀವವಾಗಿ ದಹನವಾಗಿದ್ದಾರೆ ಹಾಗೂ 22 ಜರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನದೊಳಗೆ ನಿಗೂಢ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಭಯೋತ್ಪಾದನೆ ಕೃತ್ಯ ಅಲ್ಲ ಎಂದು ಹೇಳಿದ್ದಾರೆ. ಕತ್ರಾದಿಂದ … Continued

ಆಧಾರ ರಹಿತ ಹೇಳಿಕೆ ಬೇಡ, ದಾಖಲೆಗಳನ್ನು ತೋರಿಸಿ: ತಾಜ್‌ ಮಹಲ್‌ ಭೂಮಿ ತಮ್ಮ ವಂಶಸ್ಥರಿಗೆ ಸೇರಿದ್ದೆಂದ ದಿಯಾ ಕುಮಾರಿಗೆ ಸವಾಲು ಹಾಕಿದ ಷಹಜಹಾನ್ ‘ವಂಶಸ್ಥ’

ನವದೆಹಲಿ: ತಾಜ್ ಮಹಲ್ ಭೂಮಿಯ ಮಾಲೀಕತ್ವದ ಬಗ್ಗೆ ಬಿಜೆಪಿ ಸಂಸದೆ ದಿಯಾ ಕುಮಾರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಯುವರಾಜ ಯಾಕೂಬ್ ಹಬೀಬುದ್ದೀನ್ ಟ್ಯೂಸಿ ಅವರು ತಾನು ಮೊಘಲರ ವಂಶಸ್ಥ ಎಂದು ಹೇಳಿಕೊಳ್ಳುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಬುಧವಾರ, ಜೈಪುರದ ರಾಜಮನೆತನದ ರಾಜಕುಮಾರಿಯೂ ಆಗಿರುವ ಕುಮಾರಿ ಮಾಧ್ಯಮಗಳೊಂದಿಗೆ ಮಾತನಾಡಿ, ತಾಜ್ ಮಹಲ್ ನಿರ್ಮಿಸಲಾದ ಭೂಮಿ ತಮ್ಮ ಕುಟುಂಬಕ್ಕೆ ಸೇರಿದ್ದು … Continued

ಮಗುವನ್ನು ಕೈಯಲ್ಲಿ ಹಿಡಿಕೊಂಡು ಕಾಲಿನಿಂದ ವಿಮಾನದ ಓವರ್‌ ಹೆಡ್‌ ಕ್ಯಾಬಿನ್‌ ಮುಚ್ಚಿದ ಮಹಿಳೆ..! ವೀಕ್ಷಿಸಿ

ಮಗುವನ್ನು ತನ್ನ ಒಂದು ಕೈಯಲ್ಲಿ ಹಿಡಿದುಕೊಂಡು, ಇನ್ನೊಂದು ಕೈಯಲ್ಲಿ ವಿಮಾನದ ಕ್ಯಾಬಿನ್‌ನಿಂದ ಸಾಮಾನುಗಳನ್ನು ಹೊರತೆಗೆಯುವ ಮಹಿಳೆಯ ವೀಡಿಯೊ ವೈರಲ್‌ ಆಗಿದೆ. ಟ್ವಿಟ್ಟರ್ ಬಳಕೆದಾರರಾದ ಫಿಗೆನ್ ಅವರು ಹಂಚಿಕೊಂಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮಹಿಳೆ ವಿಮಾನದಲ್ಲಿ ಕಸರತ್ತು ಮಾಡುವುದನ್ನು ಇದು ತೋರಿಸುತ್ತದೆ. ಅವಳು ಮಾಡಲಾಗದ ಕೆಲಸವನ್ನು ಮಾಡಿದ್ದಾಲೆ, ಅಂದರೆ ಜಿಮ್ನಾಸ್ಟ್‌ನಂತೆ ತನ್ನ ಬಲಗಾಲನ್ನು ಎತ್ತಿ ತನ್ನ ಕಾಲಿನಿಂದ ಓವರ್‌ಹೆಡ್ … Continued

ರಾಜ್ಯಸಭೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ನಾಳೆ, ಶುಕ್ರವಾರ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರುಮುಂದಿನ ತಿಂಗಳು … Continued

ಬುದ್ಗಾಮ್‌ನಲ್ಲಿ ಭುಗಿಲೆದ್ದ ಕಾಶ್ಮೀರಿ ಪಂಡಿತನ ಹತ್ಯೆ ಖಂಡಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿಚಾರ್ಜ್, ಅಶ್ರುವಾಯು

ಬುಡ್ಗಮ್:ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ರಾಹುಲ್ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರಿ ನೌಕರರು ಮತ್ತು ಕಾಶ್ಮೀರಿ ಪಂಡಿತರ ಕುಟುಂಬಗಳು ಲೆಫ್ಟಿನೆಂಟ್‌ ಗವರ್ನರ್‌ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು. ಗುರುವಾರ ಚದೂರ ಪಟ್ಟಣದ ತಹಶೀಲ್‌ ಕಚೇರಿಯೊಳಗೆ ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2010-11ರಲ್ಲಿ … Continued

ಗ್ಯಾನವಪಿ-ಕಾಶಿ ವಿಶ್ವನಾಥ ವಿವಾದ: ಮಸೀದಿ ಒಳಗೆ ಸರ್ವೆ, ವಿಡಿಯೊಗ್ರಫಿ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ

ನವದೆಹಲಿ: ವಾರಣಸಿಯ ಗ್ಯಾನವಪಿ ಮಸೀದಿಯಲ್ಲಿ ಪರಿಶೀಲನೆ ನಡೆಸಿ ಸರ್ವೆ ಮತ್ತು ವಿಡಿಯೊಗ್ರಫಿ ಮಾಡಲು ನ್ಯಾಯಾಲಯ ನೇಮಿಸಿರುವ ಆಯುಕ್ತರಿಗೆ ಅನುಮತಿಸಿರುವ ಅಲಾಹಾಬಾದ್‌ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಪ್ರಕರಣವನ್ನು ತುರ್ತಾಗಿ ಪಟ್ಟಿ ಮಾಡುವಂತೆ ಅಂಜುಮನ್‌ ಇಂತೆಜಾಮಿಯಾ ಮಸೀದಿ ಸಲ್ಲಿಸಿರುವ ಮನವಿಯನ್ನು ಹಿರಿಯ ವಕೀಲ ಹುಜೇಫಾ ಅಹ್ಮದಿ ಅವರು ಮುಖ್ಯ ನ್ಯಾಯಮೂರ್ತಿ ಎನ್‌ ವಿ … Continued

ಶ್ರೀಲಂಕಾದ ನೂತನ ಪ್ರಧಾನಿಯಿಂದ ಅಧಿಕಾರ ಸ್ವೀಕಾರ: ದೇಶದ ಆರ್ಥಿಕ ಸಂಕಷ್ಟದಲ್ಲಿ”ಭಾರತದ ನೆರವಿಗೆ ಧನ್ಯವಾದ

ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಅವಧಿಯಲ್ಲಿ ಭಾರತದೊಂದಿಗೆ ನಿಕಟ ಬಾಂಧವ್ಯವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ ಮತ್ತು ಸ್ವಾತಂತ್ರ್ಯದ ನಂತರದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ದೇಶಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಶ್ರೀಲಂಕಾದ 26ನೇ ಪ್ರಧಾನಿಯಾಗಿ 73 ವರ್ಷದ ರಾನಿಲ್ ವಿಕ್ರಮಸಿಂಘೆ ಅವರು ಗುರುವಾರ ಪ್ರಮಾಣ … Continued

ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ … Continued

ನೀಟ್ ಪಿಜಿ ಪರೀಕ್ಷೆ-2022 ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PGಗೆ ನೋಂದಾಯಿಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಪರೀಕ್ಷೆಯನ್ನು ವಿಳಂಬಗೊಳಿಸುವುದರಿಂದ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎರಡು ಲಕ್ಷ ವಿದ್ಯಾರ್ಥಿಗಳ ಮೇಲೆ ಪರಿಣಾಮ … Continued