ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕಂದಾಯ ಇಲಾಖೆ ಆರಂಭಿಸಿರುವ ‘ಹಲೋ ರೆವಿನ್ಯೂ ಮಿನಿಸ್ಟರ್-72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ’ ಎಂಬ ಸಹಾಯವಾಣಿಗೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ, ಆಸಿಡ್ ದಾಳಿ ಸಂತ್ರಸ್ತರು ತೀವ್ರ ಮಾನಸಿಕ ಸಂಕಟಕ್ಕೆ ಒಳಗಾಗುತ್ತಾರೆ ಮತ್ತು ಸಮಾಜದಿಂದ ತಿರಸ್ಕಾರಕ್ಕೆ ಒಳಗಾಗುತ್ತಾರೆ.ಅವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಅವರ ಮಾಸಿಕ ಪಿಂಚಣಿಯನ್ನು 3,000-10,000 ರೂ.ಗಳಿಗೆ ಏರಿಸಲಾಗಿದೆ. ಇದಲ್ಲದೇ ಅವರಿಗೆ ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಾಗುವುದು, ಇದರಿಂದ ಅವರು ಘನತೆಯಿಂದ ಜೀವನ ನಡೆಸಲು ತಮ್ಮದೇ ಆದ ಉದ್ಯಮವನ್ನು ಪ್ರಾರಂಭಿಸಬಹುದು ಎಂದು ಬೊಮ್ಮಾಯಿ ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ