ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಜಾಲತಾಣಗಳ ಸಮರ ಆರಂಭವಾಗಿದೆ.ಎಚ್ಚೆತ್ತ ಪಕ್ಷದ ಕೇಂದ್ರ ನಾಯಕರು ಸಂಯಮ ಕಾಪಾಡಿಕೊಳ್ಳುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೇ ಚರ್ಚೆಯನ್ನು ಅಂತ್ಯಗೊಳಿಸುವಂತೆ ಎಲ್ಲರಿಗೂ ಸೂಚಿಸಿದ್ದಾರೆ. ಅದನ್ನು ಮುಂದುವರಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಾನಿಯಾಗುತ್ತದೆ. ಪಕ್ಷದ ಎಲ್ಲ ಕಾರ್ಯಕರ್ತರು ದೊಡ್ಡ ಧ್ಯೇಯೋದ್ದೇಶದತ್ತ ಗಮನಹರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಒಟ್ಟಾಗಿ ಕೆಲಸ ಮಾಡೋಣ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದ್ದಾರೆ.
ಅಲಿಖಿತ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ರಮ್ಯಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಕ್ಷದ ಕೆಲವರು ಒಬ್ಬರ ನಂತರ ಒಬ್ಬರಂತೆ ಮಾತನಾಡಿದ್ದಾರೆ. ದೊಡ್ಡ ಧ್ಯೇಯೋದ್ದೇಶದತ್ತ ಗಮನಹರಿಸಬೇಕಾಗಿದೆ. ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಕಾಂಗ್ರೆಸ್ ಆಂತರಿಕ ಪ್ರಜಾಪ್ರಭುತ್ವ ಪಕ್ಷ. ಅದರಂತೆಯೇ ನಡೆಯೊಣ ಎಂದು ಹೇಳಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್, ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ನಟಿ ರಮ್ಯಾ ಟ್ವೀಟ್ ಅನಗತ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ನಟಿ ರಮ್ಯಾ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಸಾರ್ವಜನಿಕವಾಗಿ ದೂರುವ ಮೂಲಕ ಅಶಿಸ್ತು ತೋರಿದ್ದಾರೆ. ಅವರು ಟ್ವೀಟ್ ಮಾಡುವ ಬದಲು ಕಾಂಗ್ರೆಸ್ ನಾಯಕರ ಮುಂದೆ ಸಮಸ್ಯೆಯನ್ನು ತರಬಹುದಿತ್ತು. ಅಲ್ಲದೆ,
ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಥವಾ ರಾಜ್ಯ ಉಸ್ತುವಾರಿಯನ್ನು ದೂರಿನೊಂದಿಗೆ ಸಂಪರ್ಕಿಸಬಹುದಿತ್ತು” ಎಂದು ಧ್ರುವನಾರಾಯಣ ಹೇಳಿದ್ದಾರೆ.
ಟ್ವಿಟರ್ ನಲ್ಲಿ ರಮ್ಯಾರಿಂದ ಟ್ರೋಲ್ ಗೆ ಒಳಗಾಗಿರುವ ನಲಪಾಡ್, ನಾವು ಯಾವತ್ತೂ ರಮ್ಯಾ ವಿರುದ್ಧ ಅಲ್ಲ. ಅವರು ನಮ್ಮ ಪಕ್ಷದ ಮಾಜಿ ಸಂಸದೆ ಮತ್ತು ಅವರು ಚಿಕ್ಕ ವಯಸ್ಸಿನಲ್ಲಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಆದರೆ ಯಾರಾದರೂ ನಮ್ಮ ನಾಯಕನನ್ನು ಪ್ರಶ್ನಿಸಿದರೆ ನಾವು ಸಮರ್ಥಿಸಿಕೊಳ್ಳುತ್ತೇವೆ .ರಮ್ಯಾ ಬಹಿರಂಗವಾಗಿ ಪ್ರಶ್ನಿಸಿದ್ದರಿಂದ ನಾವು ಪ್ರತಿಕ್ರಿಯಿಸಲು ಆ ವೇದಿಕೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ