ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬಕುಮಾರ ದೇಬ್ ರಾಜೀನಾಮೆ

ಅಗರ್ತಲ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬಕುಮಾರ್ ದೇಬ್ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರು ಶನಿವಾರ ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
ದೇಬ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ಬಿಜೆಪಿ ಶಾಸಕರಿಂದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕಳುಹಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.

ಪಕ್ಷ ಎಲ್ಲಕ್ಕಿಂತ ಮಿಗಿಲಾಗಿದೆ. ನಾನು ಪ್ರಧಾನಿ ಮೋದಿಯವರ ನಾಯಕತ್ವ ಮತ್ತು ನಿರ್ದೇಶನದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥನಾಗಿ ಮತ್ತು ಮುಖ್ಯಮಂತ್ರಿಯಾಗಿ ತ್ರಿಪುರಾದ ಜನರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸಿದ್ದೇನೆ. ನಾನು ಶಾಂತಿ, ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕೋವಿಡ್ ಬಿಕ್ಕಟ್ಟಿನಿಂದ ರಾಜ್ಯವನ್ನು ಹೊರತರಲು ಪ್ರಯತ್ನಿಸಿದೆ” ಎಂದು ಅವರು ರಾಜೀನಾಮೆಯ ನಂತರ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕೋಟಕ್‌ ಮಹೀಂದ್ರಾ ಬ್ಯಾಂಕಿಗೆ ಆರ್‌ಬಿಐ ನಿರ್ಬಂಧ : ಹೊಸ ಗ್ರಾಹಕರ ಆನ್‌ಲೈನ್‌ ಸೇರ್ಪಡೆ, ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆಗೆ ಬ್ರೇಕ್‌

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದಕ್ಕೂ ಸಮಯದ ಚೌಕಟ್ಟು ಇದೆ, ನಾವು ಆ ಸಮಯದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ. ನನ್ನನ್ನು ಎಲ್ಲಿಗೆ ಕಳುಹಿಸಿದರೂ ಅದು ಮುಖ್ಯಮಂತ್ರಿ ಅಥವಾ ಇನ್ನಾವುದೇ ಹುದ್ದೆಯಾಗಿರಲಿ, ಬಿಪ್ಲಬ್ ದೇಬ್ ಎಲ್ಲೆಲ್ಲಿಯೂ ಹೊಂದಿಕೊಳ್ಳುತ್ತಾರೆ” ಎಂದು ಅವರು ಹೇಳಿದರು.
ಬಿಪ್ಲಬಕುಮಾರ್ ದೇಬ್ ಅವರು ಬಿಜೆಪಿಯಿಂದ ಈಶಾನ್ಯ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ಟ್ವಿಪ್ರಾ (ಐಪಿಎಫ್‌ಟಿ) ಸಹಭಾಗಿತ್ವದಲ್ಲಿ 2018 ರ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷವು ಎಡರಂಗದ 25 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿತು.
ಅಸೆಂಬ್ಲಿ ಚುನಾವಣೆಗೆ ಕೇವಲ ಒಂದು ವರ್ಷ ಉಳಿದಿರುವಾಗ, ಬಿಜೆಪಿ ಶುಕ್ರವಾರ ಪಕ್ಷ ಮತ್ತು ಅದರ ಮುಂಚೂಣಿ ಸಂಘಟನೆಗಳ ಶ್ರೇಣಿಯಲ್ಲಿ ಪುನಶ್ಚೇತನವನ್ನು ಘೋಷಿಸಿದೆ. ಹಿರಿಯ ಬುಡಕಟ್ಟು ನಾಯಕ ಬಿಕಾಶ್ ದೆಬ್ಬರ್ಮಾ ಅವರನ್ನು ಪಕ್ಷದ ಎಸ್ಟಿ ಮೋರ್ಚಾದ ಅಧ್ಯಕ್ಷರನ್ನಾಗಿ ಮಾಡಲಾಯಿತು.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement