ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹಸರನ್ನು ಕೋರ್ ಕಮಿಟಿ ಸಭೆಯಲ್ಲಿ ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.
ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ಮನೆಗೆ ವಿಜಯೇಂದ್ರ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಗಂಭೀರ ಚಿಂತನೆ ನಡೆಸಿದ್ದು, ಇಪತ್ತು ಅಭಿರ್ಥಿಗಳ ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಲಾಗಿದ್ದು, ಅದರಲ್ಲಿ ಬಿ.ವೈ.ವಿಜಯೇಂದ್ರ ಅವರ ಹಸರೂ ಇದೆ ಎನ್ನಲಾಗಿದೆ. ಆದರೆ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂಬ ಒಂದು ಸಾಲಿನ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸಂಪುಟ ಪುನಾರಚನೆಯಾದರೆ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು. ಆರು ತಿಂಗಳೊಳಗೆ ಅವರು ಯಾವುದಾದರೊಂದು ಸದನದ ಸದಸ್ಯರಾಗಬೇಕು. ಹೀಗಾಗಿ ವಿಧಾನಪರಿಷತ್‍ಗೆ ಚುನಾವಣೆಯಲ್ಲಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.
ವಿಜಯೇಂದ್ರ ಸಂಪುಟಕ್ಕೆ ಬಂದರೆ ಹಳೇ ಮೈಸೂರು ಸೇರಿದಂತೆ ಲಿಂಗಾಯಿತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆಗೆ ಅವರನ್ನು ಬಳಕೆ ಮಾಡಿಕೊಳ್ಳಬೇಕು ಎಂಬ ಅಭಿಪ್ರಾಯ ಸಹ ವ್ಯಕ್ತವಾಗಿದೆ ಎನ್ನಲಾಗಿದೆ. ಹೀಗಾಗಿ ಹೈಕಮಾಂಡ್ ಒಪ್ಪಿದರೆ ವಿಜಯೇಂದ್ರ ಮೇಲ್ಮನೆಗೆ ಆಯ್ಕೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ.
ವಿಜಯೇಂದ್ರ ಅವರಲ್ಲದೆ, ಮಾಜಿ ಸಚಿವ ಲಕ್ಷ್ಮಣ್ ಸವದಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಎಂ.ರಾಜೇಂದ್ರ, ನಿರ್ಮಲಕುಮಾರ ಸುರಾನಾ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಮಹೇಶ ಟೆಂಗಿನಕಾಯಿ, ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ.ನರೇಂದ್ರ ಬಾಬು, ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಕೆಲ ಹೆಸರುಗಳನ್ನು ಸಹ ಶಿಫಾರಸು ಮಾಡಲಾಗಿದೆ. ಒಂದು ಸ್ಥಾನವನ್ನು ಸಿನಿಮಾ ಅಥವಾ ಕಲೆ ಕ್ಷೇತ್ರಕ್ಕೆ ನಿಗದಿ ಮಾಡಲಾಗಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ