ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶನ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾಯಾಗಿದ್ದ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಗೇಶನ ಕಾಲಿಗೆ ಪೊಲೀಸರು ಗುಂಡುಹಾರಿಸಿ ಮತ್ತೆ ಬಂಧಿಸಿದ ಘಟನೆ ನಡೆದಿದೆ.
ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಕರೆತರುವಾಗ ದಾರಿಯಲ್ಲಿ ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ ಕೇಳಿದ್ದಾನೆ. ಕೆಂಗೇರಿ ಫ್ಲೈಓವರ್​ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶನನ್ನು ಹಿಡಿಯಲು ಯತ್ನಿಸಿದ ಕಾನ್ಸ್ಟೇಬಲ್‌ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.​ ಆಗ ಗಾಳಿಯಲ್ಲಿ ಗುಂಡುಹಾರಿಸಿ ಓಡಿಹೋಗದಂತೆ ಆರೋಪಿ ನಾಗೇಶಗೆ ಕಾಮಾಕ್ಷಿಪಾಳ್ಯ ಠಾಣೆ ಇನ್ಸ್​ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದ್ದಾರೆ. ಆದರೂ ತಪ್ಪಿಸಿಕೊಳ್ಳಲೆತ್ನಿಸಿದ್ದಾನೆ. ಆಗ ನಾಗೇಶನ ಬಲಗಾಲಿಗೆ ಇನ್ಸ್​ಪೆಕ್ಟರ್​ ಪ್ರಶಾಂತ್ ಗುಂಡು ಹಾರಿಸಿ ನಂತರ ಬಂಧಿಸಿದ್ದಾರೆ. ಗಾಯಾಳು ನಾಗೇಶನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಯುವತಿ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿ ನಾಗೇಶ 16 ದಿನಗಳ ಬಳಿಕ ಪೊಲೀಸರಿಗೆ ಸೆರೆ ಸಿಕ್ಕಿದ್ದ. ಕೃತ್ಯ ಎಸಗಿ ಊರು ಬಿಟ್ಟ ನಾಗ ಆಶ್ರಮ ಸೇರಿದ್ದ. ಏಪ್ರಿಲ್ 28 ರಂದು ಯುವತಿ ಮೇಲೆ ಆಸಿಡ್ ದಾಳಿ ಮಾಡಿದ್ದ ನಾಗೇಶ ಪರಾರಿಯಾಗಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಲೇ ಇದ್ದ.
ನಾಗೇಶನ ಹುಡುಕಾಟದಲ್ಲಿ ಪೊಲೀಸರ ಹಲವು ಆಯಾಮದ ತನಿಖೆ ಮಾಡಿದ್ದ ಪೊಲೀಸರು ವಿವಿಧ ರಾಜ್ಯಗಳಲ್ಲಿ ಈತನಿಗಾಗಿ ಹುಡುಕಾಟ ನಡೆಸಿದ್ದರು. ಧಾರ್ಮಿಕ ಸ್ಥಳಗಳಲ್ಲೂ ಹುಡುಕಾಟ ನಡೆಸಿದ್ದ ಪೊಲೀಸರಿಗೆ ಆತ ಉಳಿದುಕೊಂಡಿದ್ದ ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ರಮಣಶ್ರೀ ಆಶ್ರಮಕ್ಕೆ ತೆರಳಿದ್ದರು. ಆಶ್ರಮದ ದಾಖಲೆ ಪರಿಶೀಲನೆ ವೇಳೆ ನಾಗೇಶ ಹೆಸರು ಪತ್ತೆಯಾಗಿದೆ. ಅಲ್ಲಿ ತಾನೊಬ್ಬ ಅನಾಥನೆಂದು ಹೇಳಿಕೊಂಡ ಆಶ್ರಯ ಪಡೆದಿದ್ದ ಆತ ಕಾವಿ ತೊಟ್ಟು ಸನ್ಯಾಸಿಯಂತೆ ನಾಟಕವಾಡಿದ್ದ. ಅಂತಿಮವಾಗಿ ವಶಕ್ಕೆ ಪಡೆದು ಕರೆತಂದ ಬೆಂಗಳೂರು ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.ಪೊಲೀಸರ ಕಾರ್ಯವೈಖರಿಯನ್ನು ಗೃಹಸಚಿವ ಆರಗ ಶ್ಲಾಘಿಸಿದರು. ನಮ್ಮ ಪೊಲೀಸರಿಗೆ ತಮಿಳುನಾಡು ಪೊಲೀಸರು ಸಹಕರಿಸಿದ್ದಾರೆ. ತಮಿಳುನಾಡು ಪೊಲೀಸರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಫಾಸ್ಟ್​ ಟ್ರ್ಯಾಕ್​ ಕೋರ್ಟ್​ನಲ್ಲಿ ಪ್ರಕರಣ ವಿಚಾರಣೆ ನಡೆಯಲಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement