ಬೆಂಗಳೂರು: ರಾಜ್ಯಾದ್ಯಂತ ಶಾಲೆಗಳು ಮೇ 16ರಿಂದ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ-ಕಾಲೇಜುಗಳಿಗೆ ತೆರಳಲು ಈ ಹಿಂದೆ ಕೆಎಸ್‌ಆರ್‌ಟಿಸಿ ( KSRTC ) ನೀಡಿರುವ ವಿದ್ಯಾರ್ಥಿ ಬಸ್ ಪಾಸ್ ತೋರಿಸಿಕೊಂಡು, ತಮ್ಮ ನಿಗಮದ ಬಸ್ ಗಳಲ್ಲಿ ಸಂಚರಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ ಶಾಲೆ-ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ 2021-22ನೇ ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿ ಬಸ್ ಪಾಸ್ ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಸಂಚರಿಸಬಹುದು ಎಂದು ತಿಳಿಸಲಾಗಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಈ ಹಿಂದೆ ನೀಡಿರುವ ಬಸ್ ಪಾಸ್ ಮಾನ್ಯತೆ ಜೂನ್ 30, 2022ರ ವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.
ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಹಾಗೂ ವಿದ್ಯಾರ್ಥಿಗಳು ನಿಯಮಾನುಸಾರ ಉಚಿತ, ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಅವಕಾಶ ನೀಡಲಾಗುತ್ತದೆ ಎಂದು ಅದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ