ಜಿಪಂ-ತಾಪಂ ಚುನಾವಣೆ: ಮೇ 17ರಂದು ರಾಜ್ಯ ಚುನಾವಣಾ ಆಯೋಗದ ಮನವಿ ಆಲಿಸಲಿರುವ ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ ಮತ್ತು ತಾಲ್ಲೂಕು ಪಂಚಾಯತ ಚುನಾವಣೆಗಳನ್ನು ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ.
ಈ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು (ಎಸ್‌ಇಸಿ) ನ್ಯಾಯಮೂರ್ತಿಗಳಾದ ಬಿ.ಎಂ. ಶ್ಯಾಂಪ್ರಸಾದ್ ಮತ್ತು ಎಂಜಿಎಸ್ ಕಮಲ್ ಅವರ ರಜಾಕಾಲದ ಪೀಠಕ್ಕೆ ಗುರುವಾರ ಮನವಿ ಸಲ್ಲಿಸಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು, ಜಿಪಂ- ತಾಪಂ ಚುನಾವಣೆ ನಡೆಸುವ ಕುರಿತು ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯು ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಹಾಗಾಗಿ ಈ ಪ್ರಕರಣದ ಶೀಘ್ರ ವಿಚಾರಣೆಗೆ ಮೆಮೊ ಸಲ್ಲಿಸಲಾಗಿತ್ತು. 2021 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಜಿಪಂ-ತಾಪಂ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಯಾರಿ ನಡೆಸಿತ್ತು. ಕ್ಷೇತ್ರಗಳ ಡಿಲಿಮಿಟೇಶನ್ ಪ್ರಕ್ರಿಯೆ ಪೂರ್ಣಗೊಂಡಿದೆ ಮತ್ತು ಮತದಾರರ ಅಂತಿಮ ಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ.ಕಳೆದ ವರ್ಷ ಮೀಸಲಾತಿ ಕರಡನ್ನು ಕೂಡ ಪ್ರಕಟಿಸಲಾಗಿತ್ತು.

ಓದಿರಿ :-   ಧಾರವಾಡ: ಮಾರ್ವೇಲ್ ಕಂಪನಿ ಕ್ಯಾಂಪಸ್ ಸಂದರ್ಶನ

ಆದರೆ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು, ರಾಜ್ಯ ಸರ್ಕಾರವು ಕ್ಷೇತ್ರಗಳನ್ನು ಮರುವಿನ್ಯಾಸಗೊಳಿಸುವ ಮತ್ತು ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸುವ ಆಯೋಗದ ಅಧಿಕಾರವನ್ನು ಹಿಂತೆಗೆದುಕೊಂಡಿತು.
ಪ್ರಕ್ರಿಯೆ ನಡೆಸಲು ಸರ್ಕಾರ ಹೊಸ ಡಿಲಿಮಿಟೇಶನ್ ಪ್ಯಾನೆಲ್ ರಚಿಸಿದೆ. ಚುನಾವಣಾ ಆಯೋಗವು ಈ ಸಮಿತಿ ರಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು.ಈ ಅರ್ಜಿ ವಿಚಾರಣೆಗೆ ಬಾಕಿ ಇತ್ತು. ಆಯೋಗದ ಮನವಿ ನಂತರ, ಹೈಕೋರ್ಟ್ ಈ ವಿಷಯದ ವಿಚಾರಣೆಯನ್ನು ಮೇ 17 ಕ್ಕೆ ಮುಂದೂಡಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ