ರಾಜ್ಯಸಭೆ, ವಿಧಾನ ಪರಿಷತ್‌ ಚುನಾವಣೆಯತ್ತ ಈಗ ಬಿಜೆಪಿ ಗಮನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸದ್ಯ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯತ್ತ ಬಿಜೆಪಿ ಗಮನಹರಿಸಿದ್ದು, ಈ ಸಂಬಂಧ ಕೋರ್ ಕಮಿಟಿ ಸಭೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ಸದ್ಯ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ನಿನ್ನೆಯೇ ಈ ಸಂಬಂಧ ಕೋರ್ ಕಮಿಟಿ ಸಭೆ ನಡೆದಿದೆ. ವರಿಷ್ಠರು ನಿಗಾ ವಹಿಸಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮತ್ತು ರಾಜ್ಯ ವಿಧಾನ ಪರಿಷತ್ತಿನ ತಲಾ ಎರಡು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಕ್ರಮವಾಗಿ ಜೂನ್ 10 ಮತ್ತು 13 ರಂದು ಚುನಾವಣೆಗಳು ನಡೆಯಲಿವೆ.
ಅಲ್ಲದೆ, ಜೂನ್ 3 ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಪಕ್ಷದ ಹೈಕಮಾಂಡ್‌ ಸಂಪರ್ಕಿಸುವುದಾಗಿ ತಿಳಿಸಿದ ಬೊಮ್ಮಾಯಿ, ಸೂಚನೆ ಆಧರಿಸಿ ಸಚಿವ ಸಂಪುಟ ಪುನಾರಚನೆ ಮಾಡಲಾಗುವುದು ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಧಾನಪರಿಷತ್‌ ಪ್ರವೇಶಿಸಿ ಸಚಿವರಾಗಬಹುದು ಎಂಬ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ವಿಷಯವನ್ನು ಪಕ್ಷದ ಹೈಕಮಾಂಡ್‌ಗೆ ಬಿಡಲಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement